

ವಿಜಯವಾಣಿ ಸುದ್ದಿಜಾಲ ಸೂಲಿಬೆಲೆ
ವಿದ್ಯೆ ಎಂಬುದು ಯಾರು ಕದಿಯಲಾಗದ ಆಸ್ತಿ. ಅಂಥ ಆಸ್ತಿಯನ್ನು ಮಕ್ಕಳಿಗೆ ನೀಡಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ಸೂಲಿಬೆಲೆ ಬಸ್ ನಿಲ್ದಾಣ ಸಮೀಪದ ಸರ್ಕಾರಿ ಕನ್ನಡ ಮಾಧ್ಯಮ, ಆಂಗ್ಲ ಮಾಧ್ಯಮ, ಉರ್ದು ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೋಮವಾರ ನೋಟ್ ಬುಕ್ ವಿತರಿಸಿ ಮಾತನಾಡಿದರು.
ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೇ ಹೊಸಕೋಟೆ ತಾಲೂಕು ಅಗ್ರಗಣ್ಯ ಸ್ಥಾನದಲ್ಲಿದ್ದು, ಇದಕ್ಕೆ ಕಾರಣರಾದ ಶಿಕ್ಷಕವೃಂದ, ಅಧಿಕಾರಿ ವರ್ಗಕ್ಕೆ ಅಭಿನಂದನೆ ಸಲ್ಲಬೇಕು. ಸರ್ಕಾರಿ ಶಾಲೆಗಳ ಬಡ ಮಕ್ಕಳಿಗೆ ಉತ್ತಮ ಬೋಧನೆ ಮಾಡಿ ಉತ್ತಮ ಪ್ರಜೆಗಳಾಗಿ ರೂಪಿಸುತ್ತಿರುವ ಶಿಕ್ಷಕರ ಕಾರ್ಯ ಪ್ರಶಂಶನೀಯ ಎಂದರು.
ಯುವ ಮುಖಂಡ ಜಿ.ನಾರಾಯಣಗೌಡ ಮಾತನಾಡಿ, ಖಾಸಗಿ ಶಾಲೆ ವ್ಯಾಮೋಹ ಬಿಡಬೇಕು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಸರ್ಕಾರಿ ಶಾಲೆಗಳ ಉಳಿವಿಗಾಗಿ ಪಾಲಕರು ಸಹಕಾರ ನೀಡಬೇಕು ಎಂದರು.
ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ಬಿ.ವಿ.ಸತೀಶಗೌಡ ಮಾತನಾಡಿ, ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಶಿಕ್ಷಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಮಾಜಿ ಸಚಿವ, ಹಾಲಿ ಸಂಸದ ಬಿ.ಎನ್.ಬಚ್ಚೇಗೌಡ ಸೇವೆ ಅನನ್ಯ. ಸೂಲಿಬೆಲೆ ಸರ್ಕಾರಿ ಉರ್ದುಪ್ರೌಢಶಾಲೆ, ಸರ್ಕಾರಿ ಪದವಿ ಪೂರ್ವ ಕಾಲೇಜು ಸ್ಥಾಪನೆ, ಸರ್ಕಾರಿ ಪದವಿ ಕಾಲೇಜಿಗೆ 5 ಎಕರೆ ಜಾಗ ಹಾಗೂ 2 ಕೋಟಿ ಅನುದಾನ ಕೊಡಿಸಿಕೊಟ್ಟು ಅನೇಕ ಹೆಣ್ಣು ಮಕ್ಕಳಿಗೆ ಪದವಿ ಶಿಕ್ಷಣ ದೊರಕುವಂತೆ ಮಾಡಿದ ಕೀರ್ತಿ ಸಲ್ಲುತ್ತದೆ ಎಂದರು. ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಬಿ.ಎನ್.ಗೋಪಾಲಗೌಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ವಿ.ಸತೀಶಗೌಡ, ಬಮುಲ್ ನಿರ್ದೇಶಕ ಮಂಜುನಾಥ್, ಗ್ರಾಪಂ ಉಪಾಧ್ಯಕ್ಷ ಶಿವರುದ್ರಪ್ಪ, ಮುಖಂಡ ಅಲ್ತಾಪ್‌ಪಾಪಾ, ಮಾಜಿ ಅಧ್ಯಕ್ಷ ಜನಾರ್ದನರೆಡ್ಡಿ, ಹಾಪ್‌ಕಾಮ್ಸ್ ನಿರ್ದೇಶಕ ಎಂ.ಬಿ.ವಂಕಟೇಶ್, ತಾಪಂ ಮಾಜಿ ಸದಸ್ಯ ಡಾ.ಡಿ.ಟಿ.ವೆಂಕಟೇಶ್, ಮಾಜಿ ಸದಸ್ಯ ಭುವನಹಳ್ಳೀ ಗೋಪಾಲಪ್ಪ, ಗಿಡ್ಡಪ್ಪನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಅಕ್ಬರ್‌ಅಲಿಖಾನ್, ಶಾಲಾ ಅಧ್ಯಕ್ಷ ಇಮ್ರಾನ್, ಉಪಾಧ್ಯಕ್ಷ ಸೈಯದ್ ಮಹಬೂಬ್, ಗ್ರಾಪಂ ಸದಸ್ಯರಾದ ನರಸಿಂಹಮೂರ್ತಿ, ಖಾಜಾ, ಸಾಬೀರ್, ಕೃಷ್ಣಪ್ಪ, ಜಿಯಾವುಲ್ಲಾ, ಲೊಕೇಶ್, ರಾಜೇಶ್ವರಿ ಇತರರು ಇದ್ದರು.