ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಪುಸ್ತಕ ಪ್ರದರ್ಶನ

8
Published on

ಮೈಸೂರು: ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸೋಮವಾರ ಪುಸ್ತಕ ಪ್ರದರ್ಶನ ಆಯೋಜಿಸಲಾಗಿತ್ತು.

ಕಾಲೇಜು ಪ್ರಾಂಶುಪಾಲ ಡಾ.ಅಬ್ದುಲ್ ರಹಿಮಾನ್ ಪುಸ್ತಕ ಓದುವ ಮೂಲಕ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿ, ಪುಸ್ತಕಗಳನ್ನು ಓದಿ ಜ್ಞಾನವನ್ನು ಪಡೆದುಕೊಳ್ಳಬೇಕು. ಇದು ಭವಿಷ್ಯದ ಉದ್ದೇಶಕ್ಕೆ ಸಹಾಯ ಮಾಡುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಂಥಪಾಲಕ ಎಚ್.ಎಲ್.ಜಯಪ್ರಕಾಶ್, ಐಕ್ಯೂಎಸಿ ಸಂಚಾಲಕ ಡಾ.ವಿ.ನಂದಕುಮಾರ್, ವಿವಿಧ ವಿಭಾಗದ ಅಧ್ಯಾಪಕರಾದ ಡಾ.ಪರಶುರಾಮ್ ಮೂರ್ತಿ, ಡಾ.ಥೋಯಾಜಾಕ್ಸಾ, ಡಾ.ರಾಮಚಂದ್ರ, ಡಾ.ರಮೇಶ್‌ಬಾಬು, ಡಾ.ರಮೇಶ್, ಡಾ.ಮಾದೇಸ್ವಾಮಿ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net