

ಮಂಡ್ಯ: ನಗರದ ಗಾಂಧಿಭವನದಲ್ಲಿ ಆ.21ರಂದು ಹಿರಿಯ ಸಾಹಿತಿ ಡಾ.ಕ್ಯಾತನಹಳ್ಳಿ ರಾಮಣ್ಣ ಅವರ ಜನಪದ ಸಾಹಿತ್ಯ ಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಾಹಿತಿ ಪ್ರೊ.ಜಿ.ಟಿ.ವೀರಪ್ಪ ತಿಳಿಸಿದರು.
ಕ್ಯಾತನಹಳ್ಳಿ ರಾಮಣ್ಣ ಅಭಿಮಾನಿ ಬಳಗ, ಗಾಂಧಿಭವನದ ಸಹಯೋಗದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಸಮಾರಂಭವನ್ನು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ.ಟಿ.ಎಂ.ಭಾಸ್ಕರ್ ಪುಸ್ತಕ ಬಿಡುಗಡೆ ಮಾಡುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಅಂಬಳಿಕೆ ಹಿರಿಯಣ್ಣ ಪ್ರಥಮ ಪ್ರತಿ ಸ್ವೀಕಾರ ಮಾಡುವರು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಕೆ.ಪ್ರೇಮಕುಮಾರ್ ಪುಸ್ತಕ ಕುರಿತು ಮಾತನಾಡುವರು. ಇದೇ ವೇಳೆ ವಿದೂಷಿ ಡಾ.ಪದ್ಮಿನಿ ಅಚ್ಚಿ ಅವರ ಮಕ್ಕಳಾದ ವಿದೂಷಿಗಳಾದ ಸಿರಿ ಮಹೇಶ್, ಇನಿ ಮಹೇಶ್ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಸಾಹಿತಿ ಡಾ.ಕ್ಯಾತನಹಳ್ಳಿ ರಾಮಣ್ಣ, ಕೀಲಾರ ಕೃಷ್ಣೇಗೌಡ ಇದ್ದರು.