ನೆನಪುಗಳ ನೇವರಿಕೆಯಲ್ಲಿ ಪುಸ್ತಕ ಬಿಡುಗಡೆ

book
Published on

ಬೆಳ್ತಂಗಡಿ: ತಮ್ಮ ಬದುಕಿನ ಜತೆಗೆ ಸುತ್ತಮುತ್ತಲ ಬದುಕಿಗೂ ಒಂದಲ್ಲ ಒಂದು ರೀತಿಯಲ್ಲಿ ಆಸರೆಯಾಗಿ ನಡೆದುಕೊಂಡವರನ್ನು ಗುರುತಿಸಿ, ನೆನವರಿಕೆ ಮಾಡಿರುವ ಕೃತಿ ನೆನಪುಗಳ ನೇವರಿಕೆಯಲ್ಲಿ ಪ್ರಸ್ತುತ ಜನಾಂಗಕ್ಕೆ ಹಾಗೂ ಮುಂದಿನ ತಲೆಮಾರಿಗೂ ಉಪಯುಕ್ತ ಮಾಹಿತಿ, ಮಾರ್ಗದರ್ಶನವಿದೆ. ಇದು ಕೇವಲ ವ್ಯಕ್ತಿ ಚಿತ್ರಣವಲ್ಲ. ಪ್ರಸ್ತುತ ವಿದ್ಯಮಾನಗಳನ್ನು ಸಾದರಪಡಿಸುವ ಮಾಹಿತಿಯ ಕಣಜವಾಗಿದ್ದು ಕುತೂಹಲದಿಂದ ಓದಿಸಿಕೊಂಡು ಹೋಗುತ್ತದೆ ಎಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಶನಿವಾರ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಮಕುಂಜದ ಟಿ. ನಾರಾಯಣ ಭಟ್ ರಚಿಸಿದ ನೆನಪುಗಳ ನೇವರಿಕೆ ಪುಸ್ತಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀನಾಥ್ ಎಂ.ಪಿ., ನಿವೃತ್ತ ಮುಖ್ಯಶಿಕ್ಷಕ ಟಿ. ರವೀಂದ್ರ ಭಟ್, ನಿವೃತ್ತ ಮುಖ್ಯಶಿಕ್ಷಕಿ ಸರೋಜಾ ಕುಮಾರಿ, ಎಂ. ಸಂಧ್ಯಾ, ಮತ್ತು ಡಾ. ಮೌಲಿಕಾ ಎಂ.ಎಸ್. ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net