

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಷ್ಟ್ರೀಯ ದೃಶ್ಯಕಲಾ ಅಕಾಡೆಮಿ ಸಹಕಾರದೊಂದಿಗೆ ನಗರದ ಜೆಎಸ್‌ಎಸ್ ಹಾಲಭಾವಿ ಸ್ಕೂಲ್ ಆಫ್ ಆರ್ಟ್ಸ್ ಸಹಯೋಗದೊಂದಿಗೆ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಷ್ಟ್ರೀಯ ದೃಶ್ಯಕಲಾ ಅಕಾಡೆಮಿಯ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ, ಗ್ರಂಥ ಬಿಡುಗಡೆ ಮತ್ತು ವಿಚಾರ ಸಂಕಿರಣ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವನ್ನು ನ. 15ರಂದು ಬೆಳಗ್ಗೆ 10.30ಕ್ಕೆ ಜೆಎಸ್‌ಎಸ್ ಹಾಲಭಾವಿ ಸ್ಕೂಲ್ ಆಫ್ ಆರ್ಟ್ಸ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರೊ. ಎಸ್.ಸಿ. ಪಾಟೀಲ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೃಶ್ಯಕಲಾ ಸೌರಭ ಕೃತಿಯನ್ನು ಚಂದ್ರಕಾ0ತ ಬೆಲ್ಲದ ಬಿಡುಗಡೆ ಮಾಡುವರು. ಕವಿವಿ ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ವಿ.ಎಲ್. ಪಾಟೀಲ ಅಧ್ಯಕ್ಷತೆ ವಹಿಸುವರು. ಹಿರಿಯ ಚಿತ್ರ ಕಲಾವಿದ ಎಂ.ಆರ್. ಬಾಳಿಕಾಯಿ, ಕವಿವಿ ಕುಲಸಚಿವ ಡಾ. ಎ. ಚನ್ನಪ್ಪ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದರು.
ಬಾಗಲಕೋಟೆಯ ಹಿರಿಯ ಚಿತ್ರಕಲಾವಿದ ಮಹಾದೇವ ಕವಿಶೆಟ್ಟಿ, ದಾವಣಗೆರೆಯ ಹಿರಿಯ ಚಿತ್ರಕಲಾವಿದ ಮಹಲಿಂಗಪ್ಪ ಎ., ಧಾರವಾಡದ ಹಿರಿಯ ಚಿತ್ರಕಲಾವಿದ ಎಂ.ಎ0. ಜಗತಾಪ, ಉಡುಪಿಯ ದೃಶ್ಯಕಲಾ ಸಾಹಿತಿ ಡಾ. ಉಪಾಧ್ಯಾಯ ಮೂಡುಬೆಳ್ಳೆ ಹಾಗೂ ಕಲಬುರಗಿಯ ಚಿತ್ರ ಕಲಾವಿದ ಡಾ. ರೆಹಮಾನ್ ಪಟೇಲ್ ಅವರಿಗೆ ರಾಷ್ಟಿçÃಯ ದೃಶ್ಯಕಲಾ ಅಕಾಡೆಮಿಯ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು. ಗುಲಬರ್ಗಾ ವಿಶ್ವವಿದ್ಯಾಲಯದಿಂದ ದೃಶ್ಯಕಲೆಯಲ್ಲಿ ಪಿಎಚ್.ಡಿ ಪದವಿ ಪಡೆದ ಡಾ. ಶಶಿಕಲಾ ಜಿ.ವಿ. ಅವರಿಗೆ ಗೌರವ ಸನ್ಮಾನ ಮಾಡಲಾಗುವುದು ಎಂದರು.
ಡಾ. ಬಿ.ಎಂ. ಪಾಟೀಲ, ಯುವರಾಜ ಸುದ್ದಿಗೋಷ್ಠಿಯಲ್ಲಿದ್ದರು.