ಅಮ್ಮನ ಕತೆಗಳು ಪುಸ್ತಕ ಬಿಡುಗಡೆ

book
ಡಾ.ಡಿ.ವೀರೇಂದ್ರ ಹೆಗ್ಗಡೆ ಪುಸ್ತಕ ಬಿಡುಗಡೆಗೊಳಿಸಿದರು. ಡಿ.ಹರ್ಷೇಂದ್ರ ಕುಮಾರ್, ಡಾ.ಸುಬ್ರಹ್ಮಣ್ಯ ಭಟ್ ಮೊದಲಾದವರಿದ್ದರು.
Published on

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ಬರೆದ ’ಅಮ್ಮನ ಕತೆಗಳು’ ಕಥಾಸಂಕಲನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು.

ಎಸ್.ಡಿ.ಎಂ. ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಮಾತನಾಡಿ, ಉಪನ್ಯಾಸಕರು ತಮ್ಮ ಶೈಕ್ಷಣಿಕ ಜವಾಬ್ದಾರಿ ನಿಭಾಯಿಸಿ ಬಿಡುವಿನ ಸಮಯವನ್ನು ಔಚಿತ್ಯಪೂರ್ಣವಾಗಿ ಬಳಸಿದ್ದಾರೆ. ಸದಭಿರುಚಿಯ ಹವ್ಯಾಸಗಳನ್ನು ಬೆಳೆಸಿಕೊಂಡಿರುವುದು ಪ್ರಶಂಸನೀಯ ಎಂದರು.

ಕೃತಿಕರ್ತ ಡಾ.ಸುಬ್ರಹ್ಮಣ್ಯ ಭಟ್, ಕಾಲೇಜಿನ ಪ್ರಾಚಾರ್ಯ ಡಾ.ಅಶೋಕ್ ಕುಮಾರ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ಸ್ ವಿಭಾಗ ಮುಖ್ಯಸ್ಥೆ ವೀಣಾ ಭಟ್, ಸಹಪ್ರಾಧ್ಯಾಪಕರಾದ ಡಾ.ಅಂತೀಶ್ ಆರ್ ಹಾಗೂ ಎಲೆಕ್ಟ್ರಿಕಲ್ ವಿಭಾಗದ ಉಪಪ್ರಾಧ್ಯಾಪಕ ಡಾ. ಸತ್ಯನಾರಾಯಣ ಪಿ. ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net