ಪುಸ್ತಕ ಮಳಿಗೆಗೆ ಬೆಂಕಿ, ಅಪಾರ ಹಾನಿ

41411
Published on

ರಾಯಬಾಗ: ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಪುಸ್ತಕ ಮಳಿಗೆಯೊಂದಕ್ಕೆ ಗುರುವಾರ ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ವಸ್ತುಗಳು ಸುಟ್ಟು ಕರಕಲಾಗಿವೆ. ನೋಟ್‌ಬುಕ್‌ಗಳು, ಸ್ಟೇಷನರಿ ಸಾಮಗ್ರಿ ಹಾಗೂ ಜೆರಾಕ್ಸ್ ಮಷಿನ್, ಕಂಪ್ಯೂಟರ್, ಪ್ರಿಂಟರ್ ಸೇರಿ ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಬೆಂಕಿ ಹೊತ್ತಿಕೊಂಡದ್ದು ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಲೋ ಅಥವಾ ಕಿಡಿಗೇಡಿಗಳ ಕೃತ್ಯವೋ ಎಂಬುದು ತನಿಖೆಯಿಂದ ತಿಳಿಯಬೇಕಿದೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net