ಜ್ಞಾನ ಸಂಪಾದನೆಗೆ ಪುಸ್ತಕ ಸಹಕಾರಿ

grnthalaya
ಗ್ರಂಥಾಲಯ ಸಪ್ತಾಹ ಅಂಗವಾಗಿ ಕನ್ನಡ ರಾಜ್ಯೋತ್ಸವ ಮತ್ತು ಡಿಜಿಟಲ್ ಸಾಕ್ಷರತೆ ಬಗ್ಗೆ ಅರಿವು ಕಾರ್ಯಕ್ರಮ ಹೆಬ್ರಿ ಗ್ರಂಥಾಲಯ ಕೇಂದ್ರದಲ್ಲಿ ಉದ್ಘಾಟನೆ ನಡೆಯಿತು.
Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ

ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಘಟಕ, ಗ್ರಾಪಂ ಗ್ರಂಥಾಲಯ ಅರಿವು, ಡಿಜಿಟಲ್ ಗ್ರಂಥಾಲಯ ಸಹಯೋಗದೊಂದಿಗೆ ಗ್ರಂಥಾಲಯ ಸಪ್ತಾಹದ ಅಂಗವಾಗಿ ಕನ್ನಡ ರಾಜ್ಯೋತ್ಸವ ಮತ್ತು ಡಿಜಿಟಲ್ ಸಾಕ್ಷರತೆ ಬಗ್ಗೆ ಅರಿವು ಕಾರ್ಯಕ್ರಮ ಹೆಬ್ರಿ ಗ್ರಂಥಾಲಯ ಕೇಂದ್ರದಲ್ಲಿ ಶನಿವಾರ ನಡೆಯಿತು.

ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ವಿದ್ಯಾಧರ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ, ಮಾನವನ ಬದುಕಿಗೆ ಪುಸ್ತಕ ಸಾಕಷ್ಟು ಮಾರ್ಗದರ್ಶನ ನೀಡುತ್ತದೆ. ಎಲ್ಲಾ ಮೂಲಗಳಿಂದ ಜ್ಞಾನ ಸಂಪಾದಿಸಿ ಕೌಶಲ ಹೆಚ್ಚಿಸಿಕೊಳ್ಳಬೇಕು ಎಂದರು.

ಹೆಬ್ರಿ ಕನ್ನಡ ಸಾಹಿತ್ಯ ಪರಿಷತ್ ಘಟಕ ಅಧ್ಯಕ್ಷ ಮುದ್ದೂರು ಶ್ರೀನಿವಾಸ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಸಮಾಜಸೇವಕ ಎಚ್.ಜನಾರ್ದನ್ ಅವರನ್ನು ಗೌರವಿಸಲಾಯಿತು. ಉಡುಪಿ ಜಿಲ್ಲಾ ಸಂಯೋಜಕಿ ರೀನಾ ಹೆಗ್ಡೆ ಡಿಜಿಟಲ್ ಸಾಕ್ಷರತೆ ಬಗ್ಗೆ ಮಾಹಿತಿ ನೀಡಿದರು. ಗ್ರಂಥಪಾಲಕಿ ಪುಷ್ಪಾವತಿ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಗೌರವ ಕಾರ್ಯದರ್ಶಿ ಮಂಜುನಾಥ ಶಿವಪುರ ಸ್ವಾಗತಿಸಿದರು. ರತ್ನಾವತಿ ನಿರೂಪಿಸಿದರು. ಪದಾಧಿಕಾರಿ ವೀಣಾ ಆರ್.ಭಟ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net