ಬೂತ್ ಮಟ್ಟದಿಂದಲೇ ಕೈ ಬಲಪಡಿಸಬೇಕು

Booth level workshop
Booth level workshop at devnalli
Published on

ಸಚಿವ ಕೆ.ಎಚ್.ಮುನಿಯಪ್ಪ ಕರೆ

ದೇವನಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಾಗಾರ


ವಿಜಯವಾಣಿ ಸುದ್ದಿಜಾಲ ದೇವನಹಳ್ಳಿ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಬೂತ್‌ಮಟ್ಟದಿಂದಲೇ ಪಕ್ಷವನ್ನು ಬಲಪಡಿಸಬೇಕು ಎಂದು ಉಸ್ತುವಾರಿ ಸಚಿವ ಕೆ.ಎಚ್.ಮುನಿಪ್ಪ ಕರೆ ನೀಡಿದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಬೂತ್‌ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷಕಾಂಗ್ರೆಸ್. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ 4 ಗ್ಯಾರಂಟಿಗಳನ್ನು ಪ್ರತಿ ಮನೆಗೆ ತಲುಪಿಸುವಲ್ಲಿ ಯಶಸ್ವಿಯಾಗಿದೆ. ಯುವನಿಧಿಯನ್ನು ಮುಂದಿನ ಡಿಸೆಂಬರ್‌ನಲ್ಲಿ ಜಾರಿಗೊಳಿಸಲು ಸಿದ್ಧತೆ ನಡೆಸಿದ್ದೇವೆ ಎಂದರು.
ರಾಜ್ಯದಲ್ಲಿ ನೀಡಿರುವ ಯೋಜನೆಗಳನ್ನು ತೆಲಂಗಾಣ, ಛತ್ತೀಸ್‌ಘಢ, ಮಧ್ಯಪ್ರದೇಶ, ರಾಜಸ್ಥಾನ, ಕೇರಳ ರಾಜ್ಯಗಳು ಅನುಕರಣೆ ಮಾಡಿ ಅಲ್ಲಿನ ಪ್ರಣಾಳಿಕೆಗಳಲ್ಲಿ ಅಳವಡಿಸಿಕೊಂಡಿರುವುದು ಸಂತಸದ ವಿಷಯವಾಗಿದ ಎಂದರು.
ಕಾಂಗ್ರೆಸ್ ಹಾಗೂ ಇನ್ನಿತರ ಜಾತ್ಯತೀತ ಪಕ್ಷಗಳು ಸೇರಿ ಇಂಡಿಯಾ ಹೆಸರನ್ನು ಇಟ್ಟುಕೊಂಡಿದ್ದೇವೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಎಲ್ಲ ಜಾತ್ಯತೀತ ಪಕ್ಷಗಳು ಒಗ್ಗಟ್ಟಾಗಿ ಚುನಾವಣೆ ಎದುರಿಸಲಿವೆ. ಜಾತ್ಯತೀತ ಪಕ್ಷಗಳು ಮತ್ತು ಕಾಂಗ್ರೆಸ್ ಸೇರಿ 2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸಂಸದರನ್ನು ಗೆಲ್ಲಿಸಿಕೊಂಡು ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net