ಸರ್ಕಾರ ಗಡಿ ಶಾಲೆ ಅಭಿವೃದ್ಧಿಪಡಿಸಲಿ

dj p pura karanji
Published on

ಪರಶುರಾಮಪುರ: ಆಂಧ್ರಪ್ರದೇಶದ ಗಡಿಯಲ್ಲಿನ ಕನ್ನಡ ಶಾಲೆಗಳ ಸರ್ವತೋಮುಖ ಬೆಳವಣಿಗೆಗೆ ರಾಜ್ಯ ಸರ್ಕಾರ ಮುಂದಾಗಬೇಕಿದೆ ಎಂದು ಸಿರಿವಾಳ ಓಬಳಾಪುರ ಗ್ರಾಪಂ ಅಧ್ಯಕ್ಷೆ ಕವಿತಾ ರಾಮಾಂಜಿನೇಯ ಹೇಳಿದರು.

ಇಲ್ಲಿನ ತಿಪ್ಪಾರೆಡ್ಡಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಜಾಜೂರು ಕ್ಲಸ್ಟರ್ ಕೇಂದ್ರದಿಂದ ಹಮ್ಮಿಕೊಂಡಿದ್ದ ಪ್ರಾಥಮಿಕ

ಶಾಲೆ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗಡಿ ಶಾಲೆಗಳ ಕುಂದು-ಕೊರತೆಗಳ ಬಗ್ಗೆ ಹೆಚ್ಚಿನ ನಿಗಾವಹಿಸಲಾಗುವುದು. ಅಧಿಕಾರಿಗಳು ಇತ್ತ ಕಡೆ ಗಮನಹರಿಸಬೇಕಿದೆ ಎಂದರು.

ತಾಪಂ ಮಾಜಿ ಸದಸ್ಯ ತಿಮ್ಮಾರೆಡ್ಡಿ ಮಾತನಾಡಿ, ಪ್ರಾಥಮಿಕ ಹಾಗೂ ಪ್ರೌಢಹಂತದ ವಿದ್ಯಾರ್ಥಿಗಳಿಗೆ ಸೃಜನಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಂಡು ಅವರಲ್ಲಿನ ಸುಪ್ತ ಪ್ರತಿಭೆ ಹೊರಬರಲು ಶಿಕ್ಷಕರು ಮಕ್ಕಳ ಆಸಕ್ತಿಗೆ ಅನುಗುಣವಾಗಿ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.

ಶಾಲಾ ಸಮಿತಿ ಅಧ್ಯಕ್ಷ ಮಾರುತಿ, ಗ್ರಾಪಂ ಉಪಾಧ್ಯಕ್ಷೆ ಅನಿತಾ, ಸದಸ್ಯರಾದ ಶಿವಮೂರ್ತಿ, ಮಧು, ಭಾಸ್ಕರ, ಲಕ್ಷ್ಮಣ, ಸಿಆರ್‌ಪಿ ನಳಿನಾಕ್ಷಿ,

ಶಿಕ್ಷಕರ ಸಂಘದ ನಿರ್ದೇಶಕ ಬಿ.ಈರಣ್ಣ, ಕೃಷ್ಣಾರೆಡ್ಡಿ, ರೈತ ಮುಖಂಡ ರಾಮಚಂದ್ರಪ್ಪ, ಹನುಮಂತರಾಯ, ಶ್ರೀನಿವಾಸ, ಹೇಮರಾಜು, ಪರಮೇಶ, ಗುರುಸ್ವಾಮಿ, ಚಂದ್ರಕಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net