

ಚಿಕ್ಕಬಳ್ಳಾಪುರ: ಬೋರ್ವೆಲ್ ಲಾರಿ ಮಗುಚಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ದುರಂತ ಸಾವಿಗೀಡಾಗಿರುವ ಘಟನೆ ಬಾಗೇಪಲ್ಲಿ ತಾಲ್ಲೂಕಿನ ಹೊಸಹುಡ್ಯ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಪ್ರದೇಶ ಮೂಲದ ಇಬ್ಬರು ಹಾಗೂ ಛತ್ತೀಸ್ಗಢದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ತ್ರಿಪಕ್ಷೀಯ ಸಭೆಯಲ್ಲಿ ಚೀನಾಕ್ಕೆ ಪರೋಕ್ಷ ಚಾಟಿ
ಘಟನಾ ಸ್ಥಳಕ್ಕೆ ಚೇಳೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)