ಬಂದ್​ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

5-hvr-05
Published on

ಹಾವೇರಿ: ಮರಾಠಾ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಶನಿವಾರ ಕರೆ ನೀಡಿದ್ದ ಕರ್ನಾಟಕ ಬಂದ್​ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಬೆಳಗ್ಗೆಯಿಂದಲೇ ಸಾರಿಗೆ ಸಂಸ್ಥೆ ವಾಹನ, ಆಟೋ ಸಂಚಾರ ಸುಗಮವಾಗಿತ್ತು. ಅಂಗಡಿ, ಹೋಟೆಲ್​ಗಳು ತೆರೆದಿದ್ದವು. ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಿದವು. ಕನ್ನಡ ಸಂಘಟನೆಗಳ ಕಾರ್ಯಕರ್ತರು ಒತ್ತಾಯಪೂರ್ವಕ ಬಂದ್ ಮಾಡಿಸಲು ಮುಂದಾಗಲಿಲ್ಲ. ಸಾರ್ವಜನಿಕರೂ ಬಂದ್​ಗೆ ಬೆಂಬಲ ನೀಡಲಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಬಂದ್​ನ ಬಿಸಿ ಕಿಂಚಿತ್ತೂ ತಾಗಲಿಲ್ಲ.

ಬಂದ್​ಗೆ ಬೆಂಬಲಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಶನಿವಾರ ನಗರದ ಸಿದ್ದಪ್ಪ ವೃತ್ತ, ಜಿಲ್ಲಾಡಳಿತ ಭವನದ ಎದುರು ಕೆಲಕಾಲ ಪ್ರತಿಭಟನೆ ನಡೆಸಿದರು.

ಕನ್ನಡಿಗರ ಭಾವನೆಗೆ ವಿರುದ್ಧವಾಗಿ ಮರಾಠಾ ಅಭಿವೃದ್ಧಿ ನಿಗಮ ರಚನೆ ಮಾಡಲಾಗಿದ್ದು, ಕೂಡಲೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. ಕರವೇ ಜಿಲ್ಲಾಧ್ಯಕ್ಷ ಸತೀಶಗೌಡ ಮುದಿಗೌಡ್ರ, ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಸುಭಾಸ ಬೆಂಗಳೂರ, ರಮೇಶ ಆನವಟ್ಟಿ, ಪ್ರಮುಖರಾದ ಕರಬಸಯ್ಯ ಬಸರಿಹಳ್ಳಿಮಠ, ಯಶವಂತಗೌಡ ದೊಡ್ಡಗೌಡ್ರ, ಗಿರೀಶ ರ್ಬಾ, ರಮೇಶ ಜಾಲಿಹಾಳ ಇತರರಿದ್ದರು.

ರಾಣೆಬೆನ್ನೂರ: ಕರ್ನಾಟಕ ಬಂದ್ ಕರೆಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಂಗಡಿ ಮುಂಗ್ಗಟ್ಟುಗಳು ಎಂದಿನಂತೆ ವ್ಯಾಪಾರ ವಹಿವಾಟು ನಡೆಸಿದವು. ಬಸ್, ಆಟೋಗಳ ಸಂಚಾರವೂ ಎಂದಿನಂತಿತ್ತು. ವಿವಿಧ ಕನ್ನಡಪರ ಸಂಘಟನೆಗಳು ನಗರದ ಪೋಸ್ಟ್ ವೃತ್ತದಲ್ಲಿ ಸಾಂಕೇತವಾಗಿ ಪ್ರತಿಭಟನೆ ನಡೆಸಿ, ಉಪತಹಸೀಲ್ದಾರ್ ಎಂ.ಎಂ. ಹಾದಿಮನಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರೈತ ಸಂಘದ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ, ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಿತ್ಯಾನಂದ ಕುಂದಾಪುರ, ಜಿಲ್ಲಾ ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ಮಂಜುನಾಥ ದುಗ್ಗತ್ತಿ, ಉತ್ತರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯದರ್ಶಿ ಕಿರಣ ಗುಳೇದ ಇತರರಿದ್ದರು.

ಬ್ಯಾಡಗಿ: ಕನ್ನಪರ ಸಂಘಟನೆಗಳು ನೀಡಿದ್ದ ಬಂದ್ ಬೆಂಬಲಿಸಿ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯ ಎದುರು ಕರವೇ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು. ಕರವೇ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಭೋವಿ, ವೀರಕನ್ನಡಿಗ ವೇದಿಕೆ ಅಧ್ಯಕ್ಷ ಚನ್ನಬಸಪ್ಪ ಶೆಟ್ಟರ ಇತರರಿದ್ದರು.

ಸವಣೂರ: ಬಂದ್ ಬೆಂಬಲಿಸಿ ಪಟ್ಟಣದಲ್ಲಿ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದ ವತಿಯಿಂದ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಮೂಲಕ ಮುಖ್ಯಮಂತ್ರಿ ಬಿಎಸ್​ವೈ ಅವರಿಗೆ ಮನವಿ ಸಲ್ಲಿಸಲಾಯಿತು. ತಾಲೂಕು ಘಟಕ ಅಧ್ಯಕ್ಷ ಅಬ್ದುಲ್​ವುುನಾಫ ಗೌಡಗೇರಿ, ಉಪಾಧ್ಯಕ್ಷ ಮಾಲತೇಶ ಗೌಡಗೇರಿ, ಪದಾಧಿಕಾರಿಗಳಾದ ಬಸವರಾಜ ಜಲ್ಲಾಪೂರ, ನಾಗರಾಜ ಹರಿಜನ, ಫಕೀರಪ್ಪ ಹರಿಜನ, ಜಗದೀಶ ಹಾಲಗಿ, ಖಾಸಿಂ ಬೇಪಾರಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net