ಮಳೆಹಾನಿಗೆ ಸೂಕ್ತ ಪರಿಹಾರ

25mdk05
Published on

ಮಡಿಕೇರಿ:

ಮಳೆ ಮತ್ತು ಪ್ರವಾಹದಿಂದ ಆಗುವ ಸಮಸ್ಯೆಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜ್ ಹೇಳಿದರು. ಮಂಗಳವಾರ ಹಾರಂಗಿ ಅಣೆಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು. ಬುಧವಾರ ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿ, ಜಿ.ಪಂ. ಸಿಇಓ, ಉಸ್ತುವಾರಿ ಸಚಿವರೊಂದಿಗೆ ಮುಖ್ಯಮಂತ್ರಿ ವಿಡಿಯೋ ಕಾನ್ಪರೆನ್ಸ್ ನಡೆಸಿ ಮಳೆ, ಪ್ರವಾಹ ಹಾನಿ ಮಾಹಿತಿ ಪಡೆಯಲಿದ್ದಾರೆ. ನಂತರ ಸೂಕ್ತ ಪರಿಹಾರವನ್ನೂ ಸರ್ಕಾರದಿಂದ ನೀಡಲಾಗುತ್ತದೆ.

ಮಳೆಗಾಲದಲ್ಲಿ ಭಾರಿ ಮಳೆಯಿಂದ ಉಂಟಾಗುವ ವಿಕೋಪಕ್ಕೆ ಶಾಶ್ವತ ಪರಿಹಾರದ ಬಗ್ಗೆಯೂ ತಜ್ಞರ ಸಮಿತಿ ಸೂಕ್ತ ಪರಿಹಾರೋಪಾಯದ ವರದಿ ನೀಡಲಿದೆ ಈ ವರದಿಯಾನುಸಾರ ಸರ್ಕಾರ ಶೀಘ್ರ ಕ್ರಮಕೈಗೊಳ್ಳುತ್ತದೆ.

ಜನರ ತೊಂದರೆಗಳ ಬಗ್ಗೆ ಮನವಿ ಸ್ವೀಕರಿಸಲಾಗಿದೆ. ಕುಶಾಲನಗರದ ಮಳೆಹಾನಿ ಪೀಡಿತ ಬಡಾವಣೆಗಳ ನಾಗರಿಕರು, ಜಿಲ್ಲೆಯ ಕಾಫಿ ಬೆಳೆಗಾರರೂ ಕೂಡ ಮಳೆಯಿಂದ ಉಂಟಾಗುತ್ತಿರುವ ಸಮಸ್ಯೆ ಬಗ್ಗೆ ಚರ್ಚಿಸಿದ್ದಾರೆ. ಎಲ್ಲದರ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಸಮಸ್ಯೆಗೆ ಪರಿಹಾರ ನೀಡಲಾಗುವದು ಎಂದು ಹೇಳಿದರು.

ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಎಸ್.ಪಿ. ರಾಮರಾಜನ್, ಹಾರಂಗಿ ಯೋಜನಾ ವೃತ್ತದ ಎಇಇ ಪುಟ್ಟಸ್ವಾಮಿ, ಕಿರಿಯ ಅಭಿಯಂತರ ಕಿರಣ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net