ಸಾರ್ವಜನಿಕರಿಗೆ ತೊಂದರೆ ಆಗದಂತೆ ಜಿಲ್ಲಾಡಳಿತ ಕ್ರಮ

bosaraju
Published on

ಮಡಿಕೇರಿ:

ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ ಹೆಚ್ಚಿನ ಹಣವಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಜಿಲ್ಲಾಡಳಿತ ಗಮನಹರಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು. ಶಾಸಕ ಡಾ. ಮಂತರ್ ಗೌಡ ಜತೆ ಗುರುವಾರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಬಾರಿ ಮೇ ಅಂತ್ಯದಲ್ಲಿಯೇ ಮುಂಗಾರು ಆರಂಭವಾಗಿದ್ದು, ಹೆಚ್ಚಿನ ಮಳೆಯಿಂದ ಜಿಲ್ಲೆಯಲ್ಲಿ ಮನೆ, ಸೇತುವೆ, ರಸ್ತೆ ಸೇರಿದಂತೆ ಹಲವು ರೀತಿಯ ಪ್ರಾಕೃತಿಕ ವಿಕೋಪ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ ಇನ್ನು ಎರಡು ತಿಂಗಳ ಕಾಲ ಭಾರಿ ಮಳೆಯಾಗುವುದರಿಂದ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರ ವಹಿಸಬೇಕು. ಜಿಲ್ಲೆಯಲ್ಲಿ ಮೇ ಅಂತ್ಯದಿAದ ಸುರಿದ ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆಗಳ ಹಾನಿಯಾಗಿದೆ. ಸೇತುವೆ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಲಾಗುವುದು. ಮನೆ ಹಾನಿ ಸಂಬAಧ ಪರಿಹಾರ ವಿತರಿಸಲಾಗಿದೆ. ಮಳೆ ನಿಂತ ನಂತರ ಶಾಶ್ವತ ಕಾಮಗಾರಿ ಕೈಗೊಳ್ಳಲಾಗುವುದು.

ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ಹಾನಿ ಬಗ್ಗೆ ಶಾಸಕರ ಜತೆ ಚರ್ಚಿಸಿ ಮುಖ್ಯಮಂತ್ರಿಗೆ ವರದಿ ನೀಡಲಾಗುವುದು. ಮಳೆ ಹಾನಿಗೆ ಹೆಚ್ಚಿನ ಹಣ ಬಿಡುಗಡೆಗೆ ಮುಖ್ಯಮಂತ್ರಿ ಅವರನ್ನು ಕೋರಲಾಗುವುದು. ಸರ್ಕಾರದ ಬಳಿ ಹಣವಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅಡಚಣೆ ಇಲ್ಲ. ಸರ್ಕಾರ 8 ಸಾವಿರ ಕೋಟಿ ರೂ. ವನ್ನು ಅಭಿವೃದ್ಧಿ ಕೆಲಸಕ್ಕಾಗಿ ಬಿಡುಗಡೆ ಮಾಡಿದೆ. ಹಾಗೆಯೇ ಕೊಡಗು ಜಿಲ್ಲೆಗೂ 100 ಕೋಟಿ ರೂ. ಬಿಡುಗಡೆ ಮಾಡಿದೆ. ಗ್ಯಾರಂಟಿ ಯೋಜನೆ ಜೊತೆಗೆ ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ಕುಶಾಲನಗರದಲ್ಲಿ ನೂತನವಾಗಿ ನಿರ್ಮಿಸಿ ಇತ್ತೀಚೆಗೆ ಉದ್ಘಾಟನೆಯಾದ ಪುರಸಭೆ ಕಚೇರಿ ಕಟ್ಟಡ ವೀಕ್ಷಿಸಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಸಾರ್ವಜನಿಕರಿಗೆ ಅನುಕೂಲವಾಗುವಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾದರಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.

ಶಾಸಕ ಡಾ.ಮಂತರ್ ಗೌಡ ಮಾತನಾಡಿ ಮರಣ ಪ್ರಮಾಣ ಪತ್ರ ನೀಡಲು ಒಂದು ತಿಂಗಳಿಗೂ ಹೆಚ್ಚು ಕಾಲ ತೆಗೆದುಕೊಳ್ಳುವುದು ಸರಿಯಲ್ಲ. ಇಂದಿನ ಸಾಮಾಜಿಕ ಜಾಲತಾಣದ ಯುಗದಲ್ಲಿ ಸಾರ್ವಜನಿಕರಿಗೆ ಸ್ಪಂದಿಸುವುದು ಅತೀ ಮುಖ್ಯವಾಗಿದೆ. ಮೇ ಮತ್ತು ಜೂನ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಂಟಾದ ಹಾನಿ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಲಾಗಿದೆ ಎಂದು ತಿಳಿಸಿದರು.

ಇದಕ್ಕೂ ಮೊದಲು ಕುಶಾಲನಗರದ ಸೇತುವೆಗೆ ತೆರಳಿ ಕಾವೇರಿ ನೀರಿನ ಹರಿವು ಪ್ರಮಾಣ ವೀಕ್ಷಿಸಿದರು. ಬಳಿಕ ಕುಶಾಲನಗರದ ಟೌನ್ ಕಾಲೋನಿ ನಿವಾಸಿ ಜಯಪ್ರಕಾಶ್ ಅವರ ಮನೆಗೆ ಮಳೆಯಿಂದ ಆದ ಹಾನಿ ಪರಿಶೀಲಿಸಿದರು. ಬಳಿಕ ಕಾವೇರಿ ನದಿ ನೀರು ಹರಿಯುವ ಕಣಿವೆ ಬಳಿಯ ತೂಗು ಸೇತುವೆ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು. ನಂತರ ರಂಗಸಮುದ್ರ ಹತ್ತಿರ ಕುಸಿಯುತ್ತಿರುವ ಸೇತುವೆ ಪರಿಶೀಲಿಸಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷಿö್ಮÃ ಚಂದ್ರು, ಉಪಾಧ್ಯಕ್ಷೆ ಪುಟ್ಟಲಕ್ಷಿö್ಮÃ, ಸದಸ್ಯರು ಮತ್ತು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net