ಬೋಸರಾಜುಗೆ ಸಚಿವ ಸ್ಥಾನ ನೀಡಲಿ

V Laxmireddy
Published on

ರಾಯಚೂರು: ಎಐಸಿಸಿ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಎನ್.ಎಸ್.ಬೋಸರಾಜುಗೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡಬೇಕು ಎಂದು ಹತ್ತಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷ ವಿ.ಲಕ್ಷ್ಮೀರೆಡ್ಡಿ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದರು. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಬೋಸರಾಜುಗೆ ಹೆಚ್ಚಿನ ಮಾಹಿತಿಯಿದ್ದು, ಸಚಿವ ಸ್ಥಾನ ನೀಡಿದರೆ ಅಭಿವೃದ್ಧಿಗೆ ಅನುಕೂಲವಾಗಲಿದೆ. ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪನೆ, ಕೈಗಾರಿಕೆ ಪ್ರದೇಶದ ಅಭಿವೃದ್ಧಿ ಕುರಿತು ಹೋರಾಟ ನಡೆಸುತ್ತಾ ಬಂದಿದ್ದೇವೆ. ಜಿಲ್ಲೆಯ ಸಮಸ್ಯೆಗಳ ನಿವಾರಣೆಗೆ ಬೋಸರಾಜುಗೆ ಸಚಿವ ಸ್ಥಾನ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ನಗರಸಭೆ ಸದಸ್ಯ ಜಿಂದಪ್ಪ, ಮುಖಂಡರಾದ ನರಸಿಂಹಲು ಮಾಡಗಿರಿ, ಅಬ್ದುಲ್ ವಾಹೀದ್, ಜಿ.ತಿಮ್ಮಾರೆಡ್ಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net