ಯಗಚಿ ಜಲಾಶಯಕ್ಕೆ ಬಾಗಿನ ಅರ್ಪಣೆ

ಯಗಚಿ ಜಲಾಶಯಕ್ಕೆ ಬಾಗಿನ ಅರ್ಪಣೆ
Published on

ಬೇಲೂರು: ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪಟ್ಟಣ ಸಮೀಪದ ಯಗಚಿ ಜಲಾಶಯ ಸಂಪೂರ್ಣ ಭರ್ತಿಯಾದ ಹಿನ್ನೆಲೆ ಶಾಸಕ ಎಚ್.ಕೆ.ಸುರೇಶ್ ನೇತೃತ್ವದಲ್ಲಿ ಜಲಾಶಯಕ್ಕೆ ಭಾನುವಾರ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಾಯಿತು.

ಹೆಚ್ಚುವರಿ ನೀರನ್ನು 5 ಕ್ರಸ್ಟ್‌ಗೇಟ್‌ಗಳ ಮೂಲಕ ನದಿಗೆ ಬಿಡಲಾಯಿತು. ಈ ವೇಳೆ ಮಾತನಾಡಿದ ಶಾಸಕ ಎಚ್.ಕೆ.ಸುರೇಶ್ ಯಗಚಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಒಳ ಹರಿವು ಹೆಚ್ಚಾಗಿದ್ದು, ಜಲಾಶಯದ ಭದ್ರತೆ ದೃಷ್ಟಿಯಿಂದ ಯಗಚಿ ನದಿ ಹಾಗೂ ಎಡದಂಡೆ ನಾಲೆ ಮೂಲಕ ನೀರು ಹರಿಸಲಾಗುತ್ತಿದೆ. ಮಾದಿಹಳ್ಳಿ, ಹಳೇಬೀಡು ಕೆರೆ ಸೇರಿದಂತೆ ತಾಲೂಕಿನ ಎಲ್ಲ ಕೆರೆಗಳನ್ನು ತುಂಬಿಸುವ ಕೆಲಸವಾಗಬೇಕು. ಇದರಿಂದ ಕ್ಷೇತ್ರದ ಜನ-ಜಾನುವಾರುಗಳಿಗೆ, ಬೆಳೆಗಳಿಗೆ ಅನುಕೂಲವಾಗುತ್ತದೆ ಎಂದರು. ಯಗಚಿ ಯೋಜನಾ ವಿಭಾಗದ ಇ.ಇ. ಪುನೀತ್, ಎಇಇ ರಾಜೇಶ್, ಎಇಇ ಪ್ರವೀಣ್, ಎಇ ಶಿವಕುಮಾರ್, ಸಂದೀಪ್, ತಹಸೀಲ್ದಾರ್ ಎಂ.ಮಮತಾ, ಜಿಪಂ ಮಾಜಿ ಸದಸ್ಯ ಸಿ.ಎಸ್.ಪ್ರಕಾಶ್, ಮುಖಂಡ ರಮೇಶ್ ಸುವರ್ಣ, ರವಿ, ಅಶೋಕ್, ಅರುಣ್‌ಕುಮಾರ್, ಮಂಜುನಾಥ್, ಹರೀಶ್, ಅಜೀತ್, ಸುರೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net