ನೇಣು ಬಿಗಿದುಕೊಂಡು ಬಾಲಕ ಆತ್ಮಹತ್ಯೆ

Crime Logo
Published on

ಸಿದ್ದಾಪುರ: ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದಲ್ಲಿ ಗುರುವಾರ ಅಪ್ರಾಪ್ತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪಾಲಿಬೆಟ್ಟ ನಿವಾಸಿ ಪ್ರದೀಪ್ ಕುಮಾರ್ ಹಾಗೂ ಕವಿರತ್ನ ದಂಪತಿ ಪುತ್ರ, ಅಮ್ಮತ್ತಿ ನೇತಾಜಿ ಶಾಲೆ ಎಂಟನೇ ತರಗತಿ ವಿದ್ಯಾರ್ಥಿ ಮಿಥುನ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ.

ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು. ಬಾಲಕನ ಆತ್ಮಹತ್ಯೆಗೆ ಇನ್ನೂ ಕಾರಣ ತಿಳಿದು ಬಂದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net