

ಶಿಗ್ಗಾಂವಿ: ಏತ ನೀರಾವರಿ ಯೋಜನೆಯಡಿ ನಿರ್ವಿುಸಿರುವ ಸಂಪಿನಲ್ಲಿ ಕಾಲು ಜಾರಿ ಬಿದ್ದು ಬಾಲಕ ಮೃತಪಟ್ಟ ಘಟನೆ ತಾಲೂಕಿನ ಬಾಡ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಗ್ರಾಮದ ಸಚಿನ ಪಾಂಡರಂಗ ಗೋದಾಯಿ (10) ಮೃತ ಬಾಲಕ. ಸಂಪಿನಲ್ಲಿ ಕಾಲು ತೊಳೆದುಕೊಳ್ಳುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಪಿಎಸ್ಐ ಸಂತೋಷ ಪಾಟೀಲ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಘಟನೆ ಕುರಿತು ಸೂಕ್ತ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಇಂತಹ ದುರ್ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ನೀರಾವರಿ ಇಲಾಖೆಗೆ ಸೂಚನೆ ನೀಡಿದ್ದಾರೆ. ಮೃತ ಬಾಲಕನ ಪೋಷಕರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.