ಮಹಡಿಯಿಂದ ಬಿದ್ದು ಬಾಲಕ ಮೃತ್ಯು

Boy Death
Published on

ಬಂಟ್ವಾಳ: ಗೆಳೆಯರ ಜತೆ ಮೂರನೇ ಮಹಡಿಯಲ್ಲಿ ಆಡುತ್ತಿದ್ದ 6ನೇ ತರಗತಿ ವಿದ್ಯಾರ್ಥಿ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಕಲ್ಲಡ್ಕದಲ್ಲಿ ನಡೆದಿದೆ.

ಕಲ್ಲಡ್ಕ ನಿವಾಸಿ ಅಹಮ್ಮದ್ ಅವರ ಪುತ್ರ ಮಹಮ್ಮದ್ ಸಾಹಿಲ್(10) ಮೃತ ಬಾಲಕ. ಕಲ್ಲಡ್ಕ ಸಮೀಪದ ಗೊಳ್ತಮಜಲು ಎಂಬಲ್ಲಿರುವ ಖಸಗಿ ರೆಸಿಡೆನ್ಸಿಯ ಮೂರನೇ ಮಹಡಿಯ ಸೀಟ್ ಹೌಸ್‌ನಲ್ಲಿ ಸಾಹಿಲ್ ಗೆಳೆಯರ ಜತೆ ಆಡುತ್ತಿದ್ದ. ಈ ವೇಳೆ ಆಯ ತಪ್ಪಿ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಶುಕ್ರವಾರ ಮೃತಪಟ್ಟಿದ್ದಾನೆ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net