

ಕಡಬ: ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಆಟೋದಲ್ಲಿದ್ದ ನಾಲ್ಕರ ಹರೆಯದ ಬಾಲಕ ಮೃತಪಟ್ಟ ಘಟನೆ ಗುರುವಾರ ಕಡಬ- ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ ಸಂಭವಿಸಿದೆ.
ಪಂಜ ನಿವಾಸಿ ನವೀನ್ ಎಂಬವರ ಪುತ್ರ ಹಾರ್ದಿಕ್(4) ಮೃತಬಾಲಕ.ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪದ ಮುರಚೆಡವು ಎಂಬಲ್ಲಿ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ರಿಕ್ಷಾದಲ್ಲಿದ್ದ ಹಾರ್ದಿಕ್‌ಗೆ ಗಂಭೀರ ಗಾಯಗಳಾಗಿದ್ದು, ಕಡಬ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆ ತಲುಪುವಷ್ಟರಲ್ಲೇ ಬಾಲಕ ಮೃತಪಟ್ಟಿದ್ದ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.