ಮೊಸಳೆ ದಾಳಿಗೆ ಬಾಲಕ ಬಲಿ

24-05-Shiva-4
ಬಾಲಕನನ್ನು ಮೊಸಳೆ ಎತ್ತುಕೊಂಡ ಹೋದ ರಾಯಚೂರು ತಾಲೂಕಿನ ಗಂಜಳ್ಳಿ ಗ್ರಾಮದ ಹತ್ತಿರದ ಕೃಷ್ಣಾ ನದಿಯಲ್ಲಿ ಶುಕ್ರವಾರ ಸಂಜೆ ಜಮಾವಣೆಗೊಂಡ ಗ್ರಾಮಸ್ಥರು.
Published on

ರಾಯಚೂರು: ನದಿಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದಾಗ ಬಾಲಕನೊಬ್ಬನನ್ನು ಮೊಸಳೆ ಹೊತ್ತುಕೊಂಡು ಹೋದ ಘಟನೆ ತಾಲೂಕಿನ ಗಂಜಳ್ಳಿ ಗ್ರಾಮದ ಬಳಿಯ ಕೃಷ್ಣಾ ನದಿ ದಂಡೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಮೃತ ಬಾಲಕನನ್ನು ವಿಶ್ವ (12) ಎಂದು ಗುರಿತಿಸಲಾಗಿದೆ. ಕುರಿಗಳನ್ನು ಮೇಯಿಸಲು ಹೋಗಿದ್ದಾಗ ಕೃಷ್ಣಾ ನದಿ ದಂಡೆಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದಾನೆ. ನದಿಯಲ್ಲಿ ಇಳಿದಾಕ್ಷಣ ಮೊಸಳೆ ದಾಳಿ ಮಾಡಿ ಬಾಲಕನನ್ನು ಹಿಡಿದುಕೊಂಡು ಹೋಗಿದೆ.
ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ಬಾಲಕನ ಮೃತ ದೇಹಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net