

ಬೆಂಗಳೂರು: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕನೋರ್ವ ಕೆರೆಯಲು ಮುಳುಗಿ ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಮಾಗಡಿ ರಸ್ಸುಂತೆಯಲ್ಲಿರುವ ಸುಂಕದಕಟ್ಟೆಯಲ್ಲಿರುವ ಪಿಳ್ಳಪ್ಪನಕಟ್ಟೆ ಕೆರೆಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಮೊಯಿನುದ್ದೀನ್(13) ಎಂದು ಗುರುತಿಸಲಾಗಿದ್ದು, ಶನಿವಾರ ಮಧ್ಯಾಹ್ನ ಈತ ನಮಾಜ್ ಮಾಡಲು ಹೋಗುತ್ತಿರುವುದಾಗಿ ಹೇಳಿ ಮನೆಯಿಂದ ಹೊರಟ್ಟಿದ್ದ. ಬಳಿಕ ತನ್ನ ಸ್ನೇಹಿತರ ಜೊತೆ ಪಿಳ್ಳಪ್ಪನಕಟ್ಟೆ ಕೆರೆಯಲ್ಲಿ ಈಜಲು ಹೋಗಿ ದಾರುಣ ಅಂತ್ಯ ಕಂಡಿದ್ದಾನೆ.
ಬಾಲಕ ಮುಳುಗಿರುವ ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಬಾಲಕನ ಮೃತದೇಹದ ಹುಡುಕಾಟದಲ್ಲಿ ನಿರತರಾಗಿದ್ದಾರೆ.
ಇದನ್ನೂ ಓದಿ: ತಾಯಿಯಿಂದ ಬೇರ್ಪಟ್ಟಿದ್ದ ಮರಿಯಾನೆ ಮೃತ್ಯು