ಹೋಳಿ ಆಡಲು ಹೋದವನಿಗೆ ಶಾಕ್​; ಆಟಕ್ಕೂ ಮುನ್ನ ಪ್ರಾಣ ಕಳೆದುಕೊಂಡ ಬಾಲಕ..

Holi Death
Published on

ವಿಜಯಪುರ: ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ ಇಲ್ಲೊಂದಷ್ಟು ಹುಡುಗರು ಇಂದು ಹೋಳಿ ಹಬ್ಬ ಮಾಡಿ ಸಂಭ್ರಮಿಸುತ್ತಿದ್ದರು. ಆದರೆ ದುರದೃಷ್ಟವಶಾತ್, ಅವರೆಲ್ಲ ಶೋಕದ ಮಡುವಿನಲ್ಲಿ ಮುಳುಗುವಂತಾಗಿದೆ. ಅಷ್ಟಕ್ಕೂ ಕಾರಣವಾಗಿದ್ದು ಅದೊಂದು ದುರಂತ.

ವಿಜಯಪುರ ಜಿಲ್ಲೆ ಕೊಲ್ಹಾರ ತಾಲ್ಲೂಕಿನ ತಳೇವಾಡ ಗ್ರಾಮದಲ್ಲಿ ಈ ಅವಘಡ ಸಂಭವಿಸಿದ್ದು, ಹಣಮಂತ ಬೀರಪ್ಪ ವಾಲಿಕಾರ (12) ಎಂಬ ಬಾಲಕ ಸಾವಿಗೀಡಾಗಿದ್ದಾನೆ. ಈತ ಹೋಳಿಯಾಟಕ್ಕೆಂದು ಅಣಿಗೊಳಿಸುತ್ತಿದ್ದಾಗ ವಿದ್ಯುತ್ ಶಾಕ್​ಗೆ ಒಳಗಾಗಿ ಸಾವಿಗೀಡಾಗಿದ್ದಾನೆ.

ಬಣ್ಣದಾಟಕ್ಕೆಂದು ಗ್ರಾಮ ಪಂಚಾಯಿತಿ ವತಿಯಿಂದ ನೀರಿನ ತೊಟ್ಟಿ ನಿರ್ಮಿಸಲಾಗಿತ್ತು. ಅದಕ್ಕೆ ನೀರು ತುಂಬುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ತುಂಡಾಗಿ ನೀರಿನ ತೊಟ್ಟಿಗೆ ಬಿದ್ದಿದೆ. ಇದರಿಂದ ವಿದ್ಯುತ್ ಶಾಕ್​ಗೆ ಒಳಗಾಗಿ ಈತ ಮೃತಪಟ್ಟಿದ್ದಾನೆ.

ಘಟನೆಗೆ ಗ್ರಾಮ ಪಂಚಾಯತಿಯ ನಿರ್ಲಕ್ಷ್ಯವೇ ಕಾರಣವೆಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಗ್ರಾಮ ಪಂಚಾಯಿತಿ ಮುಂದೆ ಬಾಲಕನ ಶವವಿಟ್ಟು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಸ್ಥಳಕ್ಕೆ ಕೂಡಗಿ ಎನ್​​ಟಿಪಿಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net