ಪಬ್ಜಿ ಆಡಬೇಡ ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ

10-hvr-05 tejas shidlapur
Published on

ಹಾವೇರಿ: ಪಬ್ಜಿ ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕನೊಬ್ಬ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ತಾಲೂಕಿನ ಸಂಗೂರು ಗ್ರಾಮದಲ್ಲಿ ಸಂಭವಿಸಿದೆ.

ತೇಜಸ್ ಶಿಡ್ಲಾಪುರ(17) ಆತ್ಮಹತ್ಯೆಗೆ ಶರಣಾದ ಬಾಲಕ. ಅತಿಯಾಗಿ ಪಬ್ಜಿ ಆಡುತ್ತಿದ್ದ ಈತನಿಗೆ ಪೋಷಕರು ಬುದ್ಧಿವಾದ ಹೇಳಿದ್ದಾರೆ. ಆಗಲೂ ಕೇಳದ್ದಕ್ಕೆ ಮೊಬೈಲ್​ಗೆ ಇಂಟರ್​ನೆಟ್ ಹಾಕಿಸಿರಲಿಲ್ಲ. ಇದರಿಂದ ಬೇಸತ್ತ ಬಾಲಕ ಆ. 31ರಂದು ತೋಟಕ್ಕೆ ಹೋಗಿ ಅಲ್ಲಿ ಬೆಳೆಗಳಿಗೆ ಸಿಂಪಡಿಸಲು ಇಟ್ಟಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ವಿಷ ಸೇವಿಸಿದ್ದ ಬಾಲಕನನ್ನು ಪೋಷಕರು ಹುಬ್ಬಳ್ಳಿಯ ಕಿಮ್ಸ್​ಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಗುರುವಾರ ಮೃತಪಟ್ಟಿದ್ದಾನೆ. ಈ ಕುರಿತು ಹಾವೇರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಬ್ಜಿ ಸೇರಿದಂತೆ ಚೀನಾದ ಅನೇಕ ಆಪ್​ಗಳನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ನಿಷೇಧಿಸಿದೆ. ಆದರೂ ಕೆಲ ಯುವಕರು ಈ ವಿಡಿಯೋ ಗೇಮ್ ಚಟವನ್ನು ಮುಂದುವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net