ಕುಂಬಳಡಿಕೆ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ

images (4)
Published on

ಕಳಸ: ಮೂಲ ಸೌಲಭ್ಯ ಕಲ್ಪಿಸಲು ಸರ್ಕಾರ ವಿಲವಾಗಿದೆ ಎಂದು ಆರೋಪಿಸಿ ಕಳಸ ಗ್ರಾಪಂ ವ್ಯಾಪ್ತಿಯ ಮಾವಿನಕೆರೆ ಗ್ರಾಮದ ಕುಂಬಳಡಿಕೆಯ 65 ಕುಟುಂಬಗಳು ಲೋಕಸಭಾ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಿವೆ. ಈ ಬಗ್ಗೆ ಕಳಸ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದ್ದು, ಕುಂಬಳಡಿಕೆಯ ಸರ್ವೇ ನಂ.153ರಲ್ಲಿ 65 ನಿರಾಶ್ರಿತ ಕುಟುಂಬಗಳು ತಾತ್ಕಾಲಿಕವಾಗಿ ಶೆಡ್ ನಿರ್ಮಿಸಿಕೊಂಡು ಆರು ವರ್ಷಗಳಿಂದ ವಾಸಿಸುತ್ತಿದ್ದರೂ ಜಾಗದ ಹಕ್ಕುಪತ್ರ, ಮನೆ ಕಂದಾಯ, ವಿದ್ಯುತ್ ಸಂಪರ್ಕ, ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಲ್ಲ. ಮೂಲಸೌಲಭ್ಯ ಕಲ್ಪಿಸುವಂತೆ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳಿಗೆ ನಿರಂತರವಾಗಿ ಮನವಿ ಸಲ್ಲಿಸುತ್ತಿದ್ದರೂ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ. ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ವರ್ತನೆ ಖಂಡಿಸಿ ಹಾಗೂ ನಮಗೆ ತುರ್ತಾಗಿ ಮೂಲ ಸೌಲಭ್ಯ ಒದಗಿಸಿಕೊಡುವಂತೆ ಒತ್ತಾಯಿಸಿ ಲೋಕಸಭಾ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಗ್ರಾಮಸ್ಥರು ಮನವಿಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net