

ಮಡಿಕೇರಿ:
ರಾಮನಗರದಲ್ಲಿ ವಕೀಲರ ಮೇಲೆ ಪೊಲೀಸರು ಅನವಶ್ಯಕವಾಗಿ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಆರೋಪಿಸಿರುವ ಮಡಿಕೇರಿ ವಕೀಲರ ಸಂಘ ಘಟನೆಯನ್ನು ತೀವ್ರವಾಗಿ ಖಂಡಿಸಿ ಮಂಗಳವಾರ ನ್ಯಾಯಾಲಯ ಕಲಾಪ ಬಹಿಷ್ಕರಿಸಿತು.
ಕ್ಷುಲ್ಲಕ ವಿಚಾರಕ್ಕೆ ಸಂಬAಧಿಸಿದAತೆ ರಾಮನಗರದಲ್ಲಿ ನಡೆದ ಪ್ರಕರಣ ಹಿನ್ನೆಲೆಯಲ್ಲಿ 40 ವಕೀಲರ ಮೇಲೆ ರಾಮನಗರ ಪೊಲೀಸರು ಮೊಕದ್ದಮೆ ದಾಖಲಿಸಿರುವುದನ್ನು ರಾಜ್ಯವ್ಯಾಪಿ ವಕೀಲರು ಖಂಡಿಸಿದ್ದಾರೆ. ವಕೀಲರ ಮೇಲೆ ಪ್ರಕರಣ ದಾಖಲು ಮಾಡಿರುವುದನ್ನು ಖಂಡಿಸಿ ರಾಮನಗರದ ನ್ಯಾಯಾಲಯದ ಕಲಾಪಗಳನ್ನು ಅಲ್ಲಿನ ವಕೀಲರು ಬಹಿಷ್ಕರಿಸಿ ಪ್ರತಿಭಟನೆ ಕೈಗೊಂಡಿದ್ದಾರೆ.
ರಾಮನಗರದ ವಕೀಲ ಸಮುದಾಯಕ್ಕೆ ಬೆಂಬಲ ವ್ಯಕ್ತಪಡಿಸಿ, ಪೊಲೀಸರ ನಿಲವು ಖಂಡಿಸಿ ಮಡಿಕೇರಿ ವಕೀಲರ ಸಂಘವು ಕೂಡ ನಿರ್ಣಯ ಕೈಗೊಂಡು ಮಂಗಳವಾರ ಸ್ವಯಂಪ್ರೇರಿತರಾಗಿ ಕಲಾಪಕ್ಕೆ ತೆರಳದೇ ಬಹಿಷ್ಕಾರ ಹಾಕಿತು.
ವಕೀಲರ ವಿರುದ್ಧದ ಮೊಕದ್ದಮೆಯನ್ನು ಕೂಡಲೇ ಕೈಬಿಡಬೇಕು. ಪೊಲೀಸ್ ದೌರ್ಜನ್ಯಕ್ಕೆ ಕಡಿವಾಣ ಬೀಳಬೇಕೆಂದು ಮಡಿಕೇರಿ ವಕೀಲರ ಸಂಘದ ಉಪಾಧ್ಯಕ್ಷ ಎಂ.ಪಿ. ನಾಗರಾಜ್ ಈ ಸಂದರ್ಭ ಒತ್ತಾಯಿಸಿದರು.