ಬಿಜೆಪಿ ದಲಿತ ಪರವಾಗಿದೆ

Thippeswamy555
Published on

ಚಿತ್ರದುರ್ಗ: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ದಲಿತರ, ನಿರ್ಗತಿಕರ, ಶೋಷಿತರ ಪರವಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಡಿ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ ಸೇರಿ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ ಸೂಚಿಸಿದೆ. ಬಡತನ ರೇಖೆಗಿಂತ ಕೆಳಗಿದ್ದು, ಬಿಪಿಎಲ್‌ ಕಾರ್ಡ್‌ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಕುಟುಂಬಗಳಿಗೆ ಮಾಸಿಕ 75 ಯುನಿಟ್‌ ವಿದ್ಯುತ್‌ ಉಚಿತವಾಗಿ ನೀಡಲು ಮುಂದಾಗಿದೆ.

ರಾಜ್ಯದ 6 ಜಿಲ್ಲೆಗಳ 10 ಸ್ಥಳಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಸ್ಮಾರಕ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗಿದೆ. ಹಿಂದುಳಿದ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net