

ವಿಜಯವಾಣಿ ಸುದ್ದಿಜಾಲ ಕೊಕ್ಕರ್ಣೆ
ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ಮಾರಾಳಿಯಲ್ಲಿ ನೂತನ ಶಿಲಾಮಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ಬ್ರಹ್ಮಬೈದರ್ಕಳ ಮತ್ತು ಶ್ರೀ ಶಿವರಾಯ ಸ್ವಾಮಿ ಹಾಗೂ ಪರಿವಾರ ದೈವಗಳ ಪುನಃ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಜೂನ್ 3 ರಿಂದ ಜೂನ್ 8ರವರೆಗೆ ನಡೆಯಲಿದೆ.
ವಾರಾಳಿ ಬಾಲಕೃಷ್ಣ ಕರಬ ಇವರ ಪ್ರಧಾನ ಅರ್ಚಕತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ಜರುಗಲಿದೆ.
ಜೂನ್ 3ರಂದು ದೇವತಾ ಪ್ರಾರ್ಥನೆ, ಗಣಪತಿ ಹೋಮ, ನವಗ್ರಹಹೋಮ, ಅಥರ್ವ ಶೀರ್ಷಾಭಿಷೇಕ, ಉಪನಿಷತ್ ಪಾರಾಯಣ ಮತ್ತು ನಾಗಸನ್ನಿಧಿಯಲ್ಲಿ ಆಶ್ಲೇಷಾ ಬಲಿ ಸೇರಿದಂತೆ ವಿವಿಧ ಪೂಜೆಗಳು ನಡೆಯಲಿದೆ. ಸಂಜೆ ಬ್ರಹ್ಮಬೈದರ್ಕಳ ಗರಡಿಯಲ್ಲಿ ಗೇಹ ಪ್ರತಿಗ್ರಹ, ಬಿಂಬ ಪರಿಗ್ರಹ, ಸ್ಥಾನ ಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷ್ನೋ ಹೋಮ ಸಹಿತ ವಿವಿಧ ಪೂಜೆಗಳು ನಡೆಯಲಿದೆ.
ಜೂ. 4ರಂದು ಬೆಳಗ್ಗೆ ಬ್ರಹ್ಮಬೈದರ್ಕಳ ಬಿಂಬ ಪ್ರತಿಷ್ಠೆ, ಪರಿವಾರ ದೈವಗಳ ಪ್ರತಿಷ್ಠೆ, ಕಲಾತತ್ವ ಹೋಮ, ಬ್ರಹ್ಮಕಲಶ ಸ್ಥಾಪನೆ, ಕಲಶಾಧಿವಾಸ ಹೋಮ, ಬ್ರಹ್ಮಕಲಶಾಭಿಷೇಕ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ದುರ್ಗಾಪರಮೇಶ್ವರಿ ದೇವರ ಸನ್ನಿಧಿಯಲ್ಲಿ ಸ್ಥಾನ ಶುದ್ಧಿ, ಪ್ರಾಸಾದ ಶುದ್ಧಿ, ವಾಸ್ತು ಮತ್ತು ರಾಕ್ಷ್ನೋ ಹೋಮ ಸಹಿತ ವಿವಿಧ ಪೂಜೆಗಳು ನಡೆಯಲಿದೆ.
ಜೂ.5ರಂದು ಬೆಳಗ್ಗೆ ಶ್ರೀ ದುರ್ಗಾಪರಮೇಶ್ವರಿ ದೇವರ ಬಿಂಬ ಪ್ರತಿಷ್ಠಾಪನೆ, ಜೀವ ಕುಂಭಾಭಿಷೇಕ ತತ್ವ ಕಲಶಹೋಮ, ತತ್ವ ಕಲಶಾಭಿಷೇಕ, ಚಂಡಿಕಾಹೋಮ, ವಾಗಂಭಣೀಸೂಕ್ತ ಯಾಗ, ಮಹಾಪೂಜೆ ನಡೆಯಲಿದೆ. ಸಂಜೆ ಪಂಚದುರ್ಗಾ ದೀಪ ನಮಸ್ಕಾರ, ಶ್ರೀ ಶಿವರಾಯ ಸ್ವಾಮಿ ಸನ್ನಿಧಿಯಲ್ಲಿ ಸ್ಥಾನ ಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷ್ನೋ ಹೋಮ ಸೇರಿದಂತೆ ಹಲವು ಪೂಜೆಗಳು ಜರುಗಲಿದೆ.
ಜೂ. 6ರಂದು ದೇವತಾ ಕಾರ್ಯಕ್ರಮಗಳು, ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ಶ್ರೀದೇವಿ ವಿರಾಟ್ ದರ್ಶನ, ಸುವಾಸಿನಿ ಪೂಜೆ, ಮಹಾಮಂತ್ರಾಕ್ಷತೆ ನಡೆಯಲಿದೆ. ಕಿಶೋಕ್ ಕುವಾರ್ ಹೆಗ್ಡೆ ಕೈಲ್ಕೆರೆ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಆನುವಂಶಿಕ ಮೊಕ್ತೇಸರ ವಿಠಲ ಶೆಟ್ಟಿ ವಾರಾಳಿಮನೆ ಉಪಸ್ಥಿತರಿರಲಿದ್ದಾರೆ.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಯಾನಂದ ಶೆಟ್ಟಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಮುಖರಾದ ಎಂ.ಸದಾನಂದ ಶೆಟ್ಟಿ, ಎಂ.ಸುಧಾಕರ ಶೆಟ್ಟಿ ವಾರಾಳಿಮನೆ, ಶಶಿಧರ ಶೆಟ್ಟಿ, ಕಾಶೀನಾಥ್ ಶೆಣೈ, ಪ್ರತಾಪ್ ಹೆಗ್ಡೆ, ಬಾಲಕೃಷ್ಣ ಶೆಟ್ಟಿ, ಪ್ರಭಾಕರ ಶೆಟ್ಟಿ, ಎಂ.ಜಯರಾಮ ಶೆಟ್ಟಿ, ಶೋಭಾ ಕೃಷ್ಣ ಪೂಜಾರಿ ಮತ್ತಿತರರು ಉಪಸ್ಥಿತರಿರುವರು.
ಶಾನಾಡಿ ಅಜಿತ್ ಕುವಾರ್ ಹೆಗ್ಡೆ ಪ್ರಸ್ತಾವನೆಗೈಯಲಿದ್ದಾರೆ. ಡಾ.ಪಾದೇಕಲ್ಲು ವಿಷ್ಣು ಭಟ್ ಮತ್ತು ಅನಂತ ಚಿನಿವಾರ ಧಾರ್ಮಿಕ ಪ್ರವಚನ ನೀಡಲಿದ್ದಾರೆ.
ಪ್ರತಿನಿತ್ಯ ಅನ್ನಸಂತರ್ಪಣೆ, ನತ್ಯ ವೈಭವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಆನುವಂಶಿಕ ಮೊಕ್ತೇಸರ ವಿಠಲ ಶೆಟ್ಟಿ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಯಾನಂದ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.