ಬ್ರಹ್ಮ ಕಳಶೋತ್ಸವ ಸಂಪನ್ನ

14-npk-2
ಹೊದ್ದೂರು ಗ್ರಾಮದ ನೂತನ ಶ್ರೀ ಭಗವತಿ ದೇವಾಲಯದಲ್ಲಿ ಗುರುವಾರ ದೇವರ ನೃತ್ಯಬಲಿ ಜರುಗುವುದರೊಂದಿಗೆ ದೇವಾಲಯದ ಪುನರ್ ಪ್ರತಿಷ್ಠಾಪನೆ ಮತ್ತು ಬ್ರಹ್ಮ ಕಳಶೋತ್ಸವಕ್ಕೆ ತೆರೆ ಎಳೆಯಲಾಯಿತು.
Published on

ನಾಪೋಕ್ಲು: ಸಮೀಪದ ಹೊದ್ದೂರು ಗ್ರಾಮದ ನೂತನ ಶ್ರೀ ಭಗವತಿ ದೇವಾಲಯದಲ್ಲಿ ಗುರುವಾರ ದೇವರ ನೃತ್ಯಬಲಿ ಮೂಲಕ ದೇವಾಲಯದ ಪುನರ್ ಪ್ರತಿಷ್ಠಾಪನೆ ಮತ್ತು ಬ್ರಹ್ಮ ಕಳಶೋತ್ಸವಕ್ಕೆ ತೆರೆ ಎಳೆಯಲಾಯಿತು.

ಬೆಳಗ್ಗೆ ಗಣಪತಿ ಹೋಮ ಮಹಾಬಲಿ, ಪೀಠ ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ಮಹಾಪೂಜೆ, ವಿವಿಧ ದೈವಿ ಕಾರ್ಯಕ್ರಮಗಳು ಜರುಗಿದ ನಂತರ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಣೆ ಮಾಡಿದ ಬಳಿಕ ಅನ್ನಸಂತರ್ಪಣೆ ನೆರವೇರಿತು. ಸುಮಾರು 1.5 ಕೋಟಿ ರೂ. ವೆಚ್ಚದಲ್ಲಿ ವಿಶೇಷ ಶಿಲೆಯಿಂದ ಪುನರ್ ನಿರ್ಮಾಣಗೊಂಡ ದೇವಾಲಯ ಗ್ರಾಮದ ನೂತನ ದೈವಿಕ ತಾಣವಾಗಿ ರೂಪುಗೊಂಡಿದೆ. ಮರಕಡ ಶ್ರೀ ಗುರಪರಾಶಕ್ತಿ ಮಠದ ನರೇಂದ್ರನಾಥ ಯೋಗೇಶ್ವರ ಸ್ವಾಮೀಜಿ ಅವರ ಪೂರ್ಣ ಅನುಗ್ರಹದೊಂದಿಗೆ ನಿತಿನ್ ನರೇಂದ್ರನಾಥ ಯೋಗೇಶ್ವರ ಸ್ವಾಮೀಜಿ ಮತ್ತು ಮಾತೆ ಶಕುಂತಲಾ ಅಮ್ಮನವರ ನೇತೃತ್ವದಲ್ಲಿ ಜೀರ್ಣೋದ್ಧಾರಗೊಂಡಿದೆ.

ಬ್ರಹ್ಮ ಶ್ರೀ ಕೆ.ಯು ಪದ್ಮನಾಭ ತಂತ್ರಿಗಳು ಮತ್ತು ಬಳಗ, ದೇವಾಲಯದ ಮುಖ್ಯ ಅರ್ಚಕ ಶ್ರೀಕಾಂತ್ ವೈದಿಕ ಪೂಜಾ ವಿಧಿ ವಿಧಾನವನ್ನು ನೆರವೇರಿಸಿಕೊಟ್ಟರು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಚೌರಿರ ಕೆ.ಮೇದಪ್ಪ, ದೇವತಕ್ಕ ನೆರವಂಡ ಸಂಜಯ್ ಪೂಣಚ್ಚ, ಸಮಿತಿ ಸದಸ್ಯ ಚೌರಿರ ಉದಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net