

ಬೆಳ್ತಂಗಡಿ: ನಂಬಿಕೆ, ಶ್ರದ್ಧೆಯಿಂದ ಸೇವೆಯ ರೂಪದಲ್ಲಿ ಭಕ್ತರು ಪಾಲ್ಗೊಳ್ಳುವ ಬ್ರಹ್ಮಕಲಶೋತ್ಸವ ಹೊರೆಕಾಣಿಕೆ ಮೊದಲಾದ ಸೇವೆಗಳು ಹಿಂದು ಸಮಾಜದ ಶಕ್ತಿಯನ್ನು ಹೆಚ್ಚಿಸುತ್ತವೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಶನಿವಾರ ಕಾಪು ಹೊಸ ಮಾರಿಗುಡಿಯ ಬ್ರಹ್ಮಕಲಶದ ಪ್ರಯುಕ್ತ ಬೆಳ್ತಂಗಡಿ ತಾಲೂಕಿನಿಂದ ಸಮರ್ಪಣೆಗೊಂಡ ಹಸಿರು ಹೊರೆಕಾಣಿಕೆಗೆ ಗುರುವಾಯನಕೆರೆಯ ಬಂಟರ ಭವನದಲ್ಲಿ ಚಾಲನೆ ನೀಡಿ ಮಾತನಾಡಿದರು.
ನಪಂ ಅಧ್ಯಕ್ಷ ಜಯಾನಂದ ಗೌಡ, ಜಿಪಂ ಮಾಜಿ ಸದಸ್ಯೆ ಮಮತಾ ಶೆಟ್ಟಿ, ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ, ಮಾಜಿ ಅಧ್ಯಕ್ಷ ಉಮೇಶ್ ಶೆಟ್ಟಿ, ಉದ್ಯಮಿಗಳಾದ ರಾಜೇಶ್ ಶೆಟ್ಟಿ ನವಶಕ್ತಿ, ಕಿರಣ್‌ಚಂದ್ರ ಡಿ.ಪುಷ್ಪಗಿರಿ, ಪುಷ್ಪರಾಜ್ ಶೆಟ್ಟಿ, ದಿನೇಶ್ ಗೌಡ, ಕಾಪು ಮಾರಿಗುಡಿ ನವಲೇಖನ ಯಜ್ಞ ಇದರ ಬೆಳ್ತಂಗಡಿ ಸಮಿತಿಯ ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ, ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಅಜಿತ್ ಶೆಟ್ಟಿ ಕೊರಿಯಾರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಿಲ್ಲಾ ಕಾರ್ಯವಾಹ ಸಂತೋಷ್ ಸಾಲಿಯಾನ್, ವಿಹಿಂಪ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಬೆಳಾಲು ಗ್ರಾಪಂ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘ ನಿರ್ದೇಶಕಿ ಅಶ್ವಿನಿ ಹೆಬ್ಬಾರ್, ಯುವ ಬಂಟರ ವಿಭಾಗದ ಅಧ್ಯಕ್ಷ ಪ್ರತೀಕ್ ಶೆಟ್ಟಿ ನೊಚ್ಚ, ಪಡಂಗಡಿ ಗ್ರಾಪಂ ಮಾಜಿ ಅಧ್ಯಕ್ಷೆ ಮೀನಾಕ್ಷಿ, ಪ್ರಮುಖರಾದ ಶಾಂತಾ ಬಂಗೇರ, ಪ್ರಶಾಂತ ಶಿರ್ಲಾಲು, ವಸಂತ ಶೆಟ್ಟಿ, ರವಿಶೆಟ್ಟಿ ಸುಲ್ಕೇರಿ ಮತ್ತಿತರರು ಉಪಸ್ಥಿತರಿದ್ದರು. ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ನಿರೂಪಿಸಿದರು.