

ಬದಿಯಡ್ಕ: ಕಾರ್ಮಾರು ಶ್ರೀ ಮಹಾವಿಷ್ಣು ದೇವರಿಗೆ ಮಾ.9ರಂದು 1008 ಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ ಜರುಗಲಿದೆ. ಶುಕ್ರವಾರ ಬೆಳಗ್ಗೆ ಗಣಪತಿ ಹೋಮ, ಇಂದ್ರಾದಿ ದಿಕ್ಪಾಲ ಪ್ರತಿಷ್ಠಾಪನೆ, ಸಪ್ತಮಾತೃಕಾ ಪ್ರತಿಷ್ಠಾಪನೆ, ನಿರ್ಮಾಲ್ಯಧಾರಿ ಪ್ರತಿಷ್ಠಾಪನೆ, ಅಂಕುರ ಪೂಜೆ, ಸೋಪಾನ ಪೂಜೆ ನಡೆಯಿತು.
ಬೆಳಗ್ಗೆ ಬಾಲಕೃಷ್ಣ ಆಚಾರ್ಯ ನೀರ್ಚಾಲು ಮತ್ತು ಬಳಗದವರಿಂದ ಯಕ್ಷಗಾನ ತಾಳಮದ್ದಳೆ, ಡಾ.ವಾಣಿಶ್ರೀ ಕಾಸರಗೋಡು ನೇತೃತ್ವದ ಸಾಹಿತ್ಯ ಗಾನ ನೃತ್ಯ ವೈಭವ, ರಾತ್ರಿ ನಾಟ್ಯನಿಲಯ ಗುರು ಬಾಲಕೃಷ್ಣ ಮಾಸ್ತರ್ ಮಂಜೇಶ್ವರ ಶಿಷ್ಯವೃಂದದಿಂದ ನೃತ್ಯಾಮೃತಂ ಪ್ರದರ್ಶನಗೊಂಡಿತು.