ವಿಜೃಂಭಣೆಯ ಬ್ರಹ್ಮಕಳಶೋತ್ಸವ

30--npk01
Published on

ನಾಪೋಕ್ಲು: ಭಾಗಮಂಡಲ ಸಮೀಪದ ಕೋರಂಗಾಲದ ಸುಬ್ರಹ್ಮಣ್ಯ ದೇವಾಲಯದಲ್ಲಿ ಅಷ್ಟ ಬಂದ ಬ್ರಹ್ಮಕಳಶೋತ್ಸವ ಇತ್ತೀಚೆಗೆ ವಿಜೃಂಭಣೆಯಿಂದ ನಡೆಯಿತು.

ಅಷ್ಟ ಬಂದ ಬ್ರಹ್ಮ ಕಳಶೋತ್ಸವದ ಅಂಗವಾಗಿ ಗಣಹೋಮ, ದೇವರಿಗೆ ಅನುಜ್ಞಾನ ಕಳಸ, ಬಿಂಬಶುದ್ಧಿ, ನವಗ್ರಹ ಹೋಮ, ತತ್ವ ಹೋಮ, ತತ್ವ ಕಳಸ, ಜೀವ ಕಳಸ ಪ್ರತಿಷ್ಠೆ, ದುರ್ಗಾ ದೀಪ ನಮಸ್ಕಾರ ಪೂಜೆ, ಪ್ರಾಯಶ್ಚಿತ ಹೋಮ, ಆದಿವಾಸ ಹೋಮ, ಕಳಸ ಮಂಟಪ ಸಂಸ್ಕಾರ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ವೃಷಭ ಲಗ್ನದಲ್ಲಿ ಬ್ರಹ್ಮಕಳಶಾಭಿಷೇಕ ನಡೆಯಿತು. ಉಪದೇವರಿಗೆ ಕಳಶಾಭಿಷೇಕ, ಮಹಾಪೂಜೆ ದೇವರಿಗೆ ಪ್ರತಿಷ್ಠೆ ಬಲಿ, ಮಂಗಳ ಮಂತ್ರಾಕ್ಷತೆ, ಆಶೀರ್ವಚನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮೂರು ದಿನಗಳ ಕಾಲ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಅಧಿಕ ಸಂಖ್ಯೆಯ ಗ್ರಾಮಸ್ಥರು ಧಾರ್ಮಿಕ ಕಾರ್ಯಕ್ರಮಗಳು ಪಾಲ್ಗೊಂಡು ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿ, ತಕ್ಕಮುಖ್ಯಸ್ಥರು, ಚುನಾಯಿತ ಪ್ರತಿನಿಧಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net