ಬ್ರಹ್ಮಕಲಶೋತ್ಸವ ಅಲಂಕಾರ ಸಮಿತಿ ಸಭೆ

manila
Published on

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ 2025 ಮಾ.27ರಿಂದ ಏ.7ರ ವರೆಗೆ ನಡೆಯಲಿದ್ದು, ಬ್ರಹ್ಮಕಲಶೋತ್ಸವದ ಅಲಂಕಾರ ಸಮಿತಿ ಸಭೆ ದೇವಸ್ಥಾನ ವಠಾರದಲ್ಲಿ ಜರುಗಿತು.

ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉಪಸ್ಥಿತಿಯಲ್ಲಿ ಸಭೆ ಆಯೋಜಿಸಲಾಗಿತ್ತು. ಅಲಂಕಾರ ಸಮಿತಿ ಅಧ್ಯಕ್ಷ ಯೋಗೇಶ್ ಎಂ.ಆರ್. ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಮಂಜುನಾಥ ಕಾಮತ್, ಕಾರ್ಯದರ್ಶಿಗಳಾದ ನಾರಾಯಣಯ್ಯ, ಅಲಂಕಾರ ಸಮಿತಿ ಕಾರ್ಯದರ್ಶಿ ಸಂದೀಪ್ ಮಧೂರು, ಬ್ರಹ್ಮಕಲಶ ಸಮಿತಿ ಪದಾಧಿಕಾರಿಗಳು, ಕ್ಷೇತ್ರ ಪರಿಸರದ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರಭಾಶಂಕರ ಸ್ವಾಗತಿಸಿದರು. ಧನಂಜಯ ಮಧೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಜಿತ್ ಮಧೂರು ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net