ಕಾಪು ದೇವಸ್ಥಾನ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ

sabhe-2
Published on

ಪಡುಬಿದ್ರಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅತ್ಯದ್ಭುತವೆಂಬಂತೆ ಬಾಗಲಕೋಟೆ ಇಳಕಲ್ ಶಿಲೆಯಲ್ಲಿ ನವ ನಿರ್ಮಾಣಗೊಳ್ಳುತ್ತಿದ್ದು ದೇಶ ವಿದೇಶಗಳಲ್ಲಿ ನೆಲೆಸಿರುವ ಭಕ್ತರ ಕೂಡುವಿಕೆಯಿಂದ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನೆರವೇರಲಿದೆ.

ಫೆ.25ರಿಂದ ಮೊದಲ್ಗೊಂಡು ಮಾರ್ಚ್ 5ರವರೆಗೆ ನವದಿನಗಳ ಪರ್ಯಂತ ವಿಶೇಷ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆ ಪ್ರಯುಕ್ತ ನವದುರ್ಗಾ ಲೇಖನ ಮತ್ತು ನವಚಂಡೀಯಾಗದ ಕುರಿತು ಮಾಹಿತಿ ನೀಡಲು ಮತ್ತು ಸ್ವರ್ಣ ಗದ್ದುಗೆ ಸಮರ್ಪಣೆ, ರಜತ ರಥ ಸಮರ್ಪಣೆ, ಮಾರಿಯಮ್ಮ ಮತ್ತು ಉಚ್ಚಂಗಿ ದೇವಿ ಸ್ವರ್ಣ ಮುಖ ಹಾಗೂ ಹಸಿರು ಹೊರೆಕಾಣಿಕೆ ಮತ್ತು ಪ್ರತಿಷ್ಠಾದಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲು 18 ದೇಶಗಳ ಪ್ರಮುಖರೊಂದಿಗೆ ವಿಶೇಷ ಸಭೆಯಲ್ಲಿ ಆಯೋಜಿಸಲಾಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಂತಾರಾಷ್ಟ್ರೀಯ ಸೇವಾ ಸಮಿತಿ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಅಬುದಾಬಿ, ಕಾರ್ಯಾಧ್ಯಕ್ಷ ಶಶಿಧರ್ ಶೆಟ್ಟಿ ಮಲ್ಲಾರ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮನೋಹರ ಎಸ್.ಶೆಟ್ಟಿ, ಮಾಧವ ಆರ್.ಪಾಲನ್ ಮತ್ತು ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಕೆ.ರಘುಪತಿ ಭಟ್ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು. ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net