ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

New Project
Published on

ಕುಂಬಳೆ: ಕಂಬಾರು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಜ.28ರಿಂದ ಫೆ.4ರವರೆಗೆ ನಡೆಯಲಿರುವ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೋಮವಾರ ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಡೆ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು.

ಶ್ರೀಕಂಬಾರು ಕ್ಷೇತ್ರದ ಪದಾಧಿಕಾರಿಗಳಾದ ಲಕ್ಷ್ಮೀನಾರಾಯಣ ಭಟ್ ನೆರಿಯ, ಎಡಕ್ಕಾನ ಗೋಪಾಲಕೃಷ್ಣ ಭಟ್, ಕುಡಾಲು ಗುತ್ತು ದಿವಾಕರ ಶೆಟ್ಟಿ, ಕೋಳಾರು ಸತೀಶ್ಚಂದ್ರ ಭಂಡಾರಿ, ಕುಡಾಲುಗುತ್ತು ರಾಜಾರಾಮ ಶೆಟ್ಟಿ, ಕುಡಾಲುಗುತ್ತು ಶ್ರೀಧರ ಶೆಟ್ಟಿ, ಸುಖೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net