ಶ್ರೀ ಕೆಂಚಾಂಬ ದೇವಿ ಬ್ರಹ್ಮಕಲಶೋತ್ಸವ

IMG-20240323-WA0308
Published on

ಆಲೂರು: ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ಹರಿಹಳ್ಳಿ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಕೆಂಚಾಂಬ ದೇವಿಯ ಬ್ರಹ್ಮಕಲಶೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ಸಡಗರ ಸಂಭ್ರಮದಿಂದ ನಡೆಯಿತು.

ಹೇಮಾವತಿ ದಡದಲ್ಲಿರುವ ಶ್ರೀ ಕೆಂಚಾಂಬ ದೇವಿಯ ಕೊಳದಿಂದ ಮಂಗಳವಾದ್ಯದೊಂದಿಗೆ 108 ಮಹಿಳೆಯರು ಪೂರ್ಣಕುಂಭಗಳನ್ನು ಮೆರವಣಿಗೆ ಮೂಲಕ ದೇವಾಲಯದ ಆವರಣಕ್ಕೆ ತಂದರು. ನಂತರ ಚಂಡಿಕಾಹೋಮ, ಮಧ್ಯಾಹ್ನ 12ಕ್ಕೆ ಕುಂಭಾಭಿಷೇಕ, ನಂತರ ಪೂರ್ಣಾಹುತಿ, ದೇವಿಗೆ ಮಹಾಮಂಗಳಾರತಿ ನಡೆದು ಸಾವಿರಾರು ಭಕ್ತರ ಸಮ್ಮುಖದಲ್ಲಿ ಬ್ರಹ್ಮಕಲಶೋತ್ಸವ ನೆರವೇರಿತು. ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ದೇವಾಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ(ರಘು), ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಂಜುನಾಥಮೂರ್ತಿ, ದೇವಸ್ಥಾನದ ಪ್ರಧಾನ ಅರ್ಚಕ ರಾಮಸ್ವಾಮಿ, ಗ್ರಾಮಸ್ಥರು ಇದ್ದರು.

ಪೋಟೋ ಕ್ಯಾಪ್ಶನ್

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net