

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ನಮ್ಮ ಮನಸಿನಲ್ಲಿ ಉತ್ತಮ ಚಿಂತನೆಗಳು ಬರಬೇಕಾದರೆ ರುದ್ರ ದೇವರ ಮತ್ತು ಒಳ್ಳೆಯ ಮಾತುಗಾರಿಕೆ ಬರಲು ಉಮಾದೇವಿಯ ಸ್ಮರಣೆ ಅಗತ್ಯ ಎಂದು ಉಡುಪಿ ಶ್ರೀ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ಸ್ವಾಮೀಜಿ ಹೇಳಿದರು.
ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾಪನೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ಭಾನುವಾರ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಸಿ ಆಶೀರ್ವಚನ ನೀಡಿದರು.
ಧರ್ಮಸ್ಥಳದ ಡಿ.ಸುರೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪೊಳಲಿ ಜ್ಯೋತಿಷಿ ಕೋಡಿಮಜಲು ಅನಂತ ಪದ್ಮನಾಭ ಉಪಾಧ್ಯಾಯ ಧಾರ್ಮಿಕ ಉಪನ್ಯಾಸ ನೀಡಿದರು.
ಗುರುಪುರದ ಶ್ರೀ ರುದ್ರಮುನಿ ಮಹಾಸ್ವಾಮೀಜಿ, ಕೇಂದ್ರ ಮಾಜಿ ಸಚಿವ ಎಂ.ವೀರಪ್ಪ ಮೊಯ್ಲಿ, ಡಾ.ಪದ್ಮನಾಭ ಉಡುಪ, ಶ್ರೀ ಕ್ಷೇತ್ರ ಕಟೀಲಿನ ಲಕ್ಷ್ಮೀನಾರಾಯಣ ಆಸ್ರಣ್ಣ, ಅನಿತಾ ಸುರೇಂದ್ರ ಕುಮಾರ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಮಂಗಳೂರು ಶ್ರೀ ಶರವು ಮಹಾಗಣಪತಿ ದೇವಸ್ಥಾನದ ರಾಘವೇಂದ್ರ ಶಾಸ್ತ್ರಿ ಎಸ್., ರಾಮ್ ಪ್ರಸಾದ್ ಭಟ್ ಕಲ್ಲಂಬೆಟ್ಟು ಪುತ್ತಿಗೆ, ಕೆಎಂಎಫ್ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಪುತ್ತಿಗೆ ಗ್ರಾಪಂ ಅಧ್ಯಕ್ಷೆ ರಾಧಾ, ಸುಭಾಷ್ ದೇವಾಡಿಗ ಕಾಯರ್ ಪುಂಡು ಪುತ್ತಿಗೆ, ಸದಾನಂದ ಶೆಟ್ಟಿ, ಭಾಸ್ಕರ್ ಕೋಟ್ಯಾನ್ ಜಲಗೋಳಿ, ಲಿಂಗಪ್ಪ ಗೌಡ, ಅರ್ಬಿ ಪುತ್ತಿಗೆಪದವು, ಶಕ್ತಿ ಪ್ರಸಾದ್ ಶೆಟ್ಟಿ ಮಿಜಾರು ಉಪಸ್ಥಿತರಿದ್ದರು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಕ್ಷೇತ್ರದ ಆನುವಂಶಿಕ ಆಡಳಿತ ಮೋಕ್ತೇಸರ ಕುಲದೀಪ ಎಂ. ಅತಿಥಿಗಳನ್ನು ಗೌರವಿಸಿದರು. ಡಾ.ಧನಂಜಯ ಕುಂಬ್ಳೆ ಕಾರ್ಯಕ್ರಮ ನಿರೂಪಿಸಿದರು.