ಬ್ರಾಹ್ಮಣ ಮಹಾಸಭಾ ಸಭೆ

Published on

ಹುಬ್ಬಳ್ಳಿ: ಶಿವಮೊಗ್ಗ ಹಾಗೂ ಬೀದರ್ ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಪ್ರಕರಣ ಸಂಬಂಧಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ದೇಶಪಾಂಡೆನಗರದ ರೋಟರಿ ಶಾಲೆ ಎದುರಿನ ರಾವೇಂದ್ರ ಸಭಾ ಭವನದಲ್ಲಿ ಏ. 21ರಂದು ಸಂಜೆ 6ಕ್ಕೆ ಸಭೆ ಕರೆಯಲಾಗಿದೆ.

ಬ್ರಾಹ್ಮಣ ಸಮುದಾಯದವರು, ವಿಪ್ರ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಆಗಮಿಸಬೇಕೆಂದು ಮಹಾಸಭೆಯ ಧಾರವಾಡ ಜಿಲ್ಲಾ ಪ್ರತಿನಿಧಿ ಲಕ್ಷ್ಮಣ ಕುಲಕರ್ಣಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net