ಗಂಗೊಳ್ಳಿ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ

gan-7
Published on

ಗಂಗೊಳ್ಳಿ: ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ ಧಾರ್ಮಿಕ ಕಾರ್ಯಕ್ರಮ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿ ಮಾರ್ಗದರ್ಶನದಲ್ಲಿ ಭಾನುವಾರ ನಡೆಯಿತು.

ಮಹಾಪ್ರಾರ್ಥನೆ ಬಳಿಕ ರಥೋತ್ಸವ ಧಾರ್ಮಿಕ ಅನುಷ್ಠಾನ, ಧ್ವಜಾರೋಹಣ ಧಾರ್ಮಿಕ ಕಾರ್ಯಕ್ರಮ ದೇವಳ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ ಮತ್ತು ತಾಂತ್ರಿಕ ಜಿ.ವಸಂತ ಭಟ್ ನೇತೃತ್ವದಲ್ಲಿ ಜರುಗಿತು. ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು, ಸಮಾಜ ಬಾಂಧವರು ಮೊದಲಾದವರು par ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net