ಮೈಸೂರು-ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ

Published on

ಮೈಸೂರು: ಜಿಲ್ಲಾಡಳಿತ ಹಾಗೂ ಮೈಸೂರು-ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘದಿಂದ ನಗರದಲ್ಲಿ ಸೆ.14ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದೆ.
ಕಲಾಮಂದಿರದಲ್ಲಿ ಆಯೋಜಿಸಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದು ಬೆಳಗ್ಗೆ 11ಕ್ಕೆ ಚಾಲನೆ ನೀಡಲಿದ್ದಾರೆ. ಸೋಲೂರು ಆರ್ಯ ಈಡಿಗ ಸಂಸ್ಥಾನ ಮಠದ ಶ್ರೀವಿಖ್ಯಾತಾನಂದ ಸ್ವಾಮೀಜಿ, ಶಿವಮೊಗ್ಗದ ನಾರಾಯಣಗುರು ಸಂಸ್ಥಾನದ ಶ್ರೀರೇಣುಕಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಮೈಸೂರು-ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ.ಕೆ.ಪೋತರಾಜ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗವಹಿಸಲಿದ್ದು, ಶಾಸಕ ಕೆ.ಹರೀಶ್‌ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಸಹಾಯಕ ಪೊಲೀಸ್ ಆಯುಕ್ತ ಬಿ.ಕೆ.ಶಿವರಾಂ ಉಪನ್ಯಾಸ ನೀಡಲಿದ್ದಾರೆ. ಕ್ರೀಡೆ, ವೈದ್ಯಕೀಯ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕರಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 8ಕ್ಕೆ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗದಿಂದ ಸಾಂಸ್ಕೃತಿಕ ಕಲಾ ತಂಡಗಳ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸಲಿವೆ ಎಂದು ತಿಳಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಕೃಷ್ಣಮೂರ್ತಿ, ಉಪಾಧ್ಯಕ್ಷ ರಾಜಶೇಖರ ಕದಂಬ, ವಿವಿಧ ಪದಾಧಿಕಾರಿಗಳಾದ ವಿ.ಜಯಣ್ಣ, ಟಿ.ಎಸ್.ಗೋಪಾಲಸ್ವಾಮಿ, ಎಸ್.ಟಿ.ರಾಜು, ಕೆ.ವಿ.ಶ್ರೀಕಾಂತ್, ಶ್ರೀನಿವಾಸ್ ಬನ್ನೂರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net