

ಉಡುಪಿ: ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆಯಿಂದ ಮಂಜೂರಾಗಿರುವ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ಮತ್ತು 32 ಸಿಬ್ಬಂದಿ ವಸತಿ ಸಂಕೀರ್ಣಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶ್ರೀದಲ್ಲಿ ಕಾಮಗಾರಿ ಪ್ರಾರಂಭವಾಗುವ ನಿರೀೆ ಇದೆ.
2024ರ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 68,221 ಮಂದಿ ಕಾರ್ಮಿಕ ವಿಮಾಯೋಜನೆ ಸದಸ್ಯರಿದ್ದಾರೆ. 4 ಲಕ್ಷಕ್ಕೂ ಅಧಿಕ ಮಂದಿ ಲಾನುಭವಿಗಳಿದ್ದಾರೆ. 60 ಸಾವಿರಕ್ಕಿಂತ ಹೆಚ್ಚು ಇಎಸ್ಐ ಸದಸ್ಯರಿರುವ ಜಿಲ್ಲೆಯಲ್ಲಿ ಆಸ್ಪತ್ರೆ ನಿರ್ಮಿಸುವುದು ಕಡ್ಡಾಯವಾಗಿದೆ. ಪ್ರಸ್ತುತ ಉಡುಪಿ, ಕುಂದಾಪುರ, ಕಾರ್ಕಳ, ಮಣಿಪಾಲ, ಪಡುಬಿದ್ರಿಯಲ್ಲಿ ಇಎಸ್ಐ ಡಿಸ್ಪೆನ್ಸರಿಗಳು ಕಾರ್ಯನಿರ್ವಹಿಸುತ್ತಿವೆ. ಈ ಔಷಧಾಲಯಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಇರುವುದರಿಂದ ರೋಗಿಗಳು ಪರದಾಡುವಂತಾಗಿದೆ. ಉನ್ನತ ಚಿಕಿತ್ಸೆ ಅಗತ್ಯವಿರುವ ಕಾರ್ಮಿಕರನ್ನು ನೋಂದಾಯಿತ ಖಾಸಗಿ ಆಸ್ಪತ್ರೆಗಳಿಗೆ ಶಿಾರಸ್ಸು ಮಾಡಲಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿಮಾರ್ಣ ಕಾರ್ಮಿಕರ ಬಹುದಿನದ ಬೇಡಿಕೆಯಾಗಿದೆ.
5.13 ಎಕ್ರೆ ಜಾಗ ಮಂಜೂರು 2022ರಲ್ಲಿ ಕೇಂದ್ರ ಕಾರ್ಮಿಕ ಸಚಿವಾಲಯ ದೇಶದಾದ್ಯಂತ 23 ನೂತನ ಇಎಸ್ಐ ಆಸ್ಪತ್ರೆಗಳನ್ನು ಮಂಜೂರು ಮಾಡಿದ್ದು, ಕರ್ನಾಟಕದ ಉಡುಪಿ, ಹಾರೋಹಳ್ಳಿ, ಬಳ್ಳಾರಿ ಜಿಲ್ಲೆಯಲ್ಲಿ 100 ಬೆಡ್ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ತಾತ್ವಿಕ ಅನುಮೋದನೆ ನೀಡಿತ್ತು. 2023ರಲ್ಲಿ ಜಿಲ್ಲಾಡಳಿತ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 5.13 ಎಕ್ರೆ ಜಾಗ ಗುರುತಿಸಿ ಇಎಸ್ಐಸಿಗೆ ಪ್ರಸ್ತಾವನೆ ಸಲ್ಲಿಸಿತ್ತು. 3 ವರ್ಷಗಳ ನಂತರ ಆಸ್ಪತ್ರೆ ನಿರ್ಮಾಣಕ್ಕೆ ವೇಗ ದೊರೆತಿದ್ದು, 150 ಕೋಟಿ ರೂ. ವೆಚ್ಚದ ಯೋಜನೆಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ.
ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದಿಂದ ಮಂಜೂರಾಗಿರುವ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ಮತ್ತು 32 ಸಿಬ್ಬಂದಿ ವಸತಿ ಸಂಕೀರ್ಣಕ್ಕೆ ಟೆಂಡರ್ ಕರೆಯುವ ಪ್ರಕ್ರಿಯೆ ನಡೆದಿದೆ. 150 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ಈ ಹಿಂದೆ ಸಂಸದರಾಗಿದ್ದ ಶೋಭಾ ಕರಂದ್ಲಾಜೆ ಶಿಾರಸ್ಸಿನಂತೆ ಆಸ್ಪತ್ರೆ ಮಂಜೂರಾಗಿದೆ. ಸುಸಜ್ಜಿತ ಆಸ್ಪತ್ರೆಯಿಂದ ಈ ಭಾಗದ ಕಾರ್ಮಿಕರಿಗೆ ಬಹಳಷ್ಟು ಅನುಕೂಲವಾಗಲಿದೆ. ಕೋಟ ಶ್ರೀನಿವಾಸ ಪೂಜಾರಿ, ಸಂಸದರು, ಉಡುಪಿ.