

ತುಮಕೂರು: ಮಿದುಳು ಜ್ವರದ ಲಸಿಕೆ ಪಡೆದ 9 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಮಧುಗಿರಿ ಪಟ್ಟಣದಲ್ಲಿ ನಡೆದಿದೆ.
ಮಧುಗಿರಿ ಪಟ್ಟಣದ ಎಂಜಿಎಂ ಶಾಲೆಯ 9 ವಿದ್ಯಾರ್ಥಿನಿಯರಿಗೆ ಇಂಜೆಕ್ಷನ್ ತೆಗೆದುಕೊಂಡ ಬಳಿಕ ತಲೆಸುತ್ತು ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಕೂಡಲೇ ಮಧುಗಿರಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದ್ದು, ವಿದ್ಯಾರ್ಥಿನಿಯರು ಚೇತರಿಸಿಕೊಂಡಿದ್ದಾರೆ. ಸ್ಥಳಕ್ಕೆ ಶಾಸಕ ಎಂ.ವಿ. ವೀರಭದ್ರಯ್ಯ ಹಾಗೂ ಎಂಎಲ್ಸಿ ರಾಜೇಂದ್ರ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ಆತಂಕಕ್ಕೆ ಒಳಗಾಗದಂತೆ ಪೋಷಕರಿಗೆ ಧೈರ್ಯ ತುಂಬಿದರು.
1 ರಿಂದ 15 ವರ್ಷದ ಮಕ್ಕಳಿಗೆ ಸರ್ಕಾರದಿಂದ ಮಿದುಳು ಜ್ವರ ಲಸಿಕೆ ನೀಡಲಾಗುತ್ತಿದೆ. ಇಂದು(ಸೋಮವಾರ) ತುಮಕೂರು ಜಿಲ್ಲಾದ್ಯಂತ ಲಸಿಕಾ ಅಭಿಯಾನ ಆರಂಭವಾಗಿದೆ.