ಅಂಗಾಂಗ ದಾನದಿಂದ 6 ಮಂದಿಗೆ ಜೀವದಾನ

O
Published on

ಬೆಂಗಳೂರು: ಮಿದುಳು ನಿಷ್ಕ್ರಿಯಗೊಂಡಿದ್ದ 45 ವರ್ಷದ ಮಹಿಳೆಯ ಅಂಗಾಂಗ ದಾನದಿಂದ ಆರು ಮಂದಿಗೆ ಜೀವದಾನ ಮಾಡಿ, ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಚನ್ನಪಟ್ಟಣ ಮೂಲದ ಯಶೋಧಮ್ಮ ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ವಾಸಿಸುತ್ತಿದ್ದರು. ಜೀವನ ನಿರ್ವಹಣೆಗೆ ಮನೆ ಕೆಲಸ ಮಾಡುತ್ತಿದ್ದರು. 11ರಂದು ಬೆಳಗ್ಗೆ ಮಿದುಳು ಪಾರ್ಶ್ವವಾಯುವಿಗೆ ಒಳಗಾದರು. ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಚಿಕಿತ್ಸೆ ನೀಡಿದ ವೈದ್ಯರು, ಮಿದುಳು ನಿಷ್ಕ್ರಿಯಗೊಂಡಿರುವುದಾಗಿ ೋಷಿಸಿದರು. ವಿಷಯ ತಿಳಿದ ಕುಟುಂಬದ ಸದಸ್ಯರು, ಆಕೆಯ ಅಂಗಾಂಗ ದಾನಕ್ಕೆ ಸಮ್ಮತಿಸಿದರು. ಹೃದಯ, ಯಕೃತ್, ಶ್ವಾಸಕೋಶ ಹಾಗೂ ಕಾರ್ನಿಯಾಗಳನ್ನು ಪಡೆದು ಅಗತ್ಯವಿರುವ ರೋಗಿಗಳಿಗೆ ಕಸಿ ಶಸಚಿಕಿತ್ಸೆ ನಡೆಸಲಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net