ಬ್ರಾೃಂಡ್ ಮಂಗಳೂರು ಪ್ರಶಸ್ತಿಗೆ ಅರ್ಜಿ ಆಹ್ವಾನ

xxr1msnjaus81
Published on




ಮಂಗಳೂರು : ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದ ಮೂಡಿಸುವ ವರದಿಗಾರಿಕೆಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ‘ಬ್ರಾೃಂಡ್ ಮಂಗಳೂರು’ ಪ್ರಶಸ್ತಿ ನೀಡಲಾಗುತ್ತಿದ್ದು 2023ನೇ ಸಾಲಿನ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದ.ಕ. ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವ ಪತ್ರಕರ್ತರು, ದೃಶ್ಯ ಮಾಧ್ಯಮ ದ ವರದಿಗಾರರು ಅರ್ಜಿ ಸಲ್ಲಿಸಬಹುದು. ಪ್ರಶಸ್ತಿ 5,001 ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ. ಪ್ರಶಸ್ತಿಗೆ 2023ರ ಜ.1ರಿಂದ ಡಿ.31ರವರೆಗಿನ ವರದಿಗಳನ್ನು ಪರಿಗಣಿಸಲಾಗುವುದು. ಅರ್ಜಿ ಸಲ್ಲಿಸುವವರು
ಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿಯ ನಾಲ್ಕು ಪ್ರತಿಗಳನ್ನು (ಒಂದು ಮೂಲಪ್ರತಿ ಕಡ್ಡಾಯ) ಸಲ್ಲಿಸಬೇಕು. ದೃಶ್ಯ ಮಾಧ್ಯಮದ ವರದಿಗಾರರು ಸಿ.ಡಿ.ಯೊಂದಿಗೆ ಪ್ರಸಾರವಾದ ದಿನಾಂಕದ ಬಗ್ಗೆ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಕಳುಹಿಸಲು ಮೇ 31 ಕೊನೆಯ ದಿನಾಂಕ.
ಪ್ರಧಾನ ಕಾರ್ಯದರ್ಶಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ಭವನ, ಲೇಡಿಹಿಲ್ ಉರ್ವ ಮಾರ್ಕೆಟ್ ರಸ್ತೆ, ಮಂಗಳೂರು-6 ಈ ವಿಳಾಸಕ್ಕೆ ಅರ್ಜಿ ಕಳುಹಿಸುವಂತೆ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net