ಪಾದಯಾತ್ರಿಗಳಿಗೆ ಉಪಹಾರ ವ್ಯವಸ್ಥೆ

Sub_Breakfast
Published on

ಸುಬ್ರಹ್ಮಣ್ಯ: ರಿಷಿ ಸಂಸ್ಕೃತಿ ವಿದ್ಯಾ ಕೇಂದ್ರ ಸಿದ್ಧ ಸಮಾಧಿ ಯೋಗ ವತಿಯಿಂದ ಡಿ.27, 28,29ರಂದು ಸುಬ್ರಹ್ಮಣ್ಯದಲ್ಲಿ ನಡೆಯುವ ವಿಶ್ವ ಹೃದಯ ಸಮ್ಮೇಳನದ ಅಂಗವಾಗಿ ಪಾದಯಾತ್ರೆಯಲ್ಲಿ ಆಗಮಿಸುವ ಸ್ವಯಂಸೇವಕರಿಗೆ ಯೇನೆಕಲ್ಲಿನಲ್ಲಿ ಸುಬ್ರಹ್ಮಣ್ಯ ರೋಟರಿಯಿಂದ ಉಪಹಾರ ವ್ಯವಸ್ಥೆ ಮಾಡಲಾಯಿತು.

ಈ ಸಮ್ಮೇಳನಕ್ಕೆ ಮಂಗಳವಾರ ಮಂಗಳೂರಿನಿಂದ ಪಾದಯಾತ್ರೆ ಆರಂಭಗೊಂಡು ಗುರುವಾರ ಯೇನೆಕಲ್ಲಿಗೆ ತಲುಪಿದ ಸಂದರ್ಭದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಪಾದಯಾತ್ರಿಗಳಿಗೆ ಬೆಳಗಿನ ಉಪಹಾರ ವ್ಯವಸ್ಥೆ ಏರ್ಪಡಿಸಲಾಯಿತು. ಪಾದಯಾತ್ರೆಯಲ್ಲಿ ಆಗಮಿಸಿದ ರೋಟರಿ ಜಿಲ್ಲೆ 3170 ಜಮಖಂಡಿ ರಾಮತೀರ್ಥದ ನಿರ್ದೇಶಕರಾದ ಲಕ್ಷ್ಮೀಕಾಂತ್ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಅಧ್ಯಕ್ಷ ಚಂದ್ರಶೇಖರ್ ನಾಯರ್ ಅವರಿಂದ ಧ್ವಜವನ್ನು ಸ್ವೀಕರಿಸಿದರು.

ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ನಾಯರ್, ಪೂರ್ವ ಅಸಿಸ್ಟೆಂಟ್ ಗವರ್ನರ್ ಶಿವರಾಮ ಯೇನೆಕಲ್, ಪೂರ್ವಾಧ್ಯಕ್ಷರಾದ ಮಾಲಪ್ಪ ಸಂಕೇಶ, ಸದಸ್ಯರಾದ ನವೀನ್ ವಾಲ್ತಾಜೆ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net