

ಬೆಳಗಾವಿ: ತಾಯಿಹಾಲು ಮಗುವಿನ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅಗತ್ಯವಾದ ಎಲ್ಲ ಪೋಷಕಾಂಶ ಒಳಗೊಂಡಿದ್ದು, ಮೊದಲ ಆರು ತಿಂಗಳು ಸ್ತನ್ಯಪಾನ ಮಾಡಿಸುವುದು ಮುಖ್ಯ ಎಂದು ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಚಿಕ್ಕಮಕ್ಕಳ ತೆ ಡಾ. ಸೋನಾಲಿ ಬಿಜ್ಜರಗ್ಗಿ ಹೇಳಿದರು.
ನಗರದ ಕೆಎಲ್ಇ ವೇಣುಧ್ವನಿ 90.4 ಎಫ್.ಎಂ. ಕೇಂದ್ರದಲ್ಲಿ ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಕೆಎಲ್ಇ ಜವಾಹರಲಾಲ್ ನೆಹರೂ ವೈದ್ಯಕಿಯ ಮಹಾವಿದ್ಯಾಲಯ ಸಹಯೋಗದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ನೇರ ಫೋನ್&ಇನ್ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಹುಟ್ಟಿದ ತಕ್ಷಣ ಬರುವ ಕೊಲಸ್ಟ್ರಮ್ ತುಂಬಾ ಪೌಷ್ಟಿಕವಾಗಿರುತ್ತದೆ. ಮಗು ತಾಯಿಹಾಲಿನ ಸೇವನೆಯಿಂದ ರೋಗಗಳ ವಿರುದ್ಧ ಹೋರಾಡುವ ಶಕ್ತಿ ಪಡೆಯುತ್ತದೆ ಎಂದರು. ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ.ಎಸ್. ಮಂಜುನಾಥ ಪೈ ಇದ್ದರು.