

ಶನಿವಾರಸಂತೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಕಲ್ಯಾಣ ಇಲಾಖೆ, ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಕಣಿವೆಬಸವನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿತ್ತು.
ಸಪ್ತಾಹದಲ್ಲಿ ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಅನುಷಾ, ಕಿರಿಯ ಆರೋಗ್ಯ ಸಹಾಯಕಿ ಇಂದಿರಾ ಸ್ತನ್ಯಪಾನದ ಮಹತ್ವ ಮತ್ತು ದಿನದ ಮಹತ್ವ ಕುರಿತು ತಾಯಂದಿರಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಆಲೂರು ಸಿದ್ದಾಪುರ ಪಿಡಿಒ ಹರೀಶ್, ಗ್ರಾಪಂ ಸದಸ್ಯ ಪಿ.ಎನ್.ಗಂಗಾಧರ್, ಕಿರಿಯ ಆರೋಗ್ಯ ಸಹಾಯಕಿ ಇಂದಿರಾ, ಆಶಾ ಕಾರ್ಯಕರ್ತೆ ಮೀನಾಕ್ಷಿ, ಅಂಗನವಾಡಿ ಶಿಕ್ಷಕಿ ಕಾವ್ಯಾ, ಸಿಬ್ಬಂದಿ ಪವಿತ್ರಾ ಮುಂತಾದವರಿದ್ದರು.