ಕಾಮಗಾರಿ ಬಿಲ್ ಗೆ ಲಂಚ, ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದ ಇಂಜಿನಿಯರ್

IMG_20250925_230944.jpg
Published on

ಚಿಕ್ಕಬಳ್ಳಾಪುರ: ನಗರಸಬೆ ಎಂಜಿನಿಯರ್ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು ಕಚೇರಿಯಲ್ಲಿನ ದೊಡ್ಡ ಲಂಚಾವತಾರಕ್ಕೆ ನಿದರ್ಶನವಾಗಿದೆ.‌ ಆರೋಪಿ ಅರುಣ್ ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳೆದ ಹಲವು ದಿನಗಳಿಂದ ಚಿಕ್ಕಬಳ್ಳಾಪುರ ನಗರಸಭೆ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿದ್ದವು.
ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡುಗಳಲ್ಲಿ ಗುತ್ತಿಗೆ ಕೆಲಸ ಮಾಡಿದ್ದ ಗುತ್ತಿಗೆದಾರರೊಬ್ಬರಿಗೆ ಕಾಮಗಾರಿ ಬಿಲ್ ಮಾಡಲು 75 ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಹಣ ನೀಡದೆ ಬಿಲ್ ಮಾಡೋದಿಲ್ಲ ಎಂದು ಪದೇ ಪದೇ ಕಿರುಕುಳ ನೀಡುತ್ತಿದ್ದರಂತೆ. ಇದರಿಂದ ರೋಸಿಹೋದ ಗುತ್ತಿಗೆದಾರ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಎಂಜಿನಿಯರ್ ಅರುಣ್ ಬೇಡಿಕೆ ಇಟ್ಟಿದ್ದ ೭೫ ಸಾವಿರದಲ್ಲಿ ಇಂದು ೩೫ ಸಾವಿರ ನೀಡುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಲಂಚದ ಹಣದ ಸಮೇತ ಎಂಜಿನಿಯರ್ ಅರುಣ್ ಅವರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net