

ಚಿಕ್ಕೋಡಿ: ಕಲ್ಲೋಳ-ಯಡೂರ ಗ್ರಾಮಗಳ ಮಧ್ಯದ ಹಾಗೂ ಕೃಷ್ಣಾ ನದಿಗೆ ಅಡ್ಡಲಾಗಿ 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬ್ರಿಡ್ಜ್ ಕಂ ಬಾಂದಾರ ನಿರ್ಮಾಣ ಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುವುದು ಎಂದು ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದ್ದಾರೆ.
ಭಾನುವಾರ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಖಡಕಲಾಟ ಗ್ರಾಮದ ಬಳಿ 1. 2 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ಮಹಾಲಕ್ಷ್ಮೀ ಏತ ನೀರಾವರಿ ಹಾಗೂ ಕುಠಾಳಿ ಗ್ರಾಮದ ಬಳಿ 2.45 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ಬಸವೇಶ್ವರ ಏತ ನೀರಾವರಿ ಕಾಮಗಾರಿ ಪರಿಶೀಲಿಸಿ ಮಾತನಾಡಿ, ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವ ಜತೆಗೆ ಶೀಘ್ರ ಪೂರ್ಣಗೊಳಿಸಬೇಕು ಎಂದು ಸಲಹೆ ನೀಡಿದರು.
ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ರಾಜೇಶ ನೇರ್ಲಿ, ಸತೀಶ ಅಪ್ಪಾಜಿಗೋಳ, ಎನ್.ಜಿ. ಪಾಟೀಲ, ಜಿಪಂ ಮಾಜಿ ಸದಸ್ಯರಾದ ವಿಶ್ವನಾಥ ಕಮತೆ, ರಾವಸಾಬ, ವಿರೂಪಾಕ್ಷಿ ಸಂಕಾಜೆ, ಕಲಗೌಡಾ ಜಾನಕಾರೆ, ಬಾಬು ಚೌಗಲಾ, ಶಂಕರ ದೇಮಣ್ಣವರ, ನೀರಾವರಿ ನಿಗಮದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಮಂಕಾಳೆ ಪೂಜಾರಿ, ರೈತರು ಹಾಗೂ ಸಾರ್ವಜನಿಕರು ಇದ್ದರು.