

ಅಣ್ಣಿಗೇರಿ (ಧಾರವಾಡ ಜಿಲ್ಲೆ):
ತಾಲೂಕಿನ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಸೈದಾಪುರ-ಹೊಸಳ್ಳಿ ಗ್ರಾಮಗಳನ್ನು ಸಂರ್ಪಸುವ ಹೊರೆಹಳ್ಳದ ಕಿರು ಸೇತುವೆ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದು, ಸಂಚಾರ ಸ್ಥಗಿತಗೊಂಡಿದೆ.
ಹಳ್ಳಿಕೇರಿ - ಇಬ್ರಾಹಿಂಪುರ ಸಂಪರ್ಕ ರಸ್ತೆಯೂ ಹಾನಿಗೊಳಗಾಗಿದೆ. ಮಳೆಯಿಂದ ಪಟ್ಟಣದ ಕೆಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಏಳು ಮನೆಗಳಿಗೆ ಭಾಗಶಃ ಹಾನಿಯಾಗಿವೆ. ಸಿಡಿಲು ಬಡಿದು ಪಟ್ಟಣದ ಹೊರ ವಲಯದಲ್ಲಿದ್ದ ಅಣ್ಣಿಗೇರಿ ಕುರಿಗಾಹಿ ಮಲ್ಲಪ್ಪ ಬೆಳ್ಳಿಕೊಪ್ಪ ಅವರಿಗೆ ಸೇರಿದ 8 ಕುರಿಗಳು ಮೃತಪಟ್ಟಿವೆ. ಪ್ರಭಾರ ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಪಂಚಾಯತ ಸಿಇಒ ಭುವನೇಶ ಪಾಟೀಲ, ಗುರುವಾರ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಮಳೆ ಹಾನಿ ಪರಿಶೀಲಿಸಿದರು.